Thursday, September 24, 2026
Thursday, September 24, 2026

ಬಜಗೋಳಿ: ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ

ಬಜಗೋಳಿ: ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ

Date:

ಕಾರ್ಕಳ: ಉಡುಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಮತ್ತು ರೋಟರಿ ಆಸ್ಪತ್ರೆ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಸಂಯುಕ್ತ ಆಶ್ರಯದಲ್ಲಿ ಬಜಗೋಳಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವೇ ಭಾಗ್ಯವೆಂಬಂತೆ ಆರೋಗ್ಯ ಅತ್ಯಂತ ಮಹತ್ವದ್ದಾಗಿದೆ. ವೈದ್ಯಕೀಯ ಪ್ರಕೋಷ್ಠದಿಂದ ಉತ್ತಮ ಕಾರ್ಯ ನಡೆಯುತ್ತಿರುವುದು ಅಭಿನಂದನೀಯ ಎಂದರು.

ಅಧ್ಯಕ್ಷತೆಯನ್ನು ಸಂಘಟಕ ಹಾಗೂ ವೈದ್ಯಕೀಯ ಪ್ರಕೋಷ್ಠದ ತಾಲೂಕು ಸಂಚಾಲಕ ಡಾ. ರಾಮದಾಸ್ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ಆಸ್ಪತ್ರೆಯ ಡಾ. ಚಿದಾನಂದ ಕುಲಕರ್ಣಿ, ಜಿಲ್ಲಾ ಸಂಚಾಲಕ ಡಾ. ರಾಮಚಂದ್ರ ಕಾಮತ್, ಗ್ರಾ.ಪಂ ಅಧ್ಯಕ್ಷ ಸುರೇಶ್, ಶಾಲಾ ಮುಖ್ಯ ಶಿಕ್ಷಕರು ಮತ್ತು ಇತರ ವೈದ್ಯರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ, ಕಣ್ಣು, ಚರ್ಮ ರೋಗ ಸೇರಿದಂತೆ ವಿವಿಧ ವಿಭಾಗದಲ್ಲಿ ಸುಮಾರು 400 ಜನರು ಶಿಬಿರದಲ್ಲಿ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!