ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 13 ರಂದು (ನಾಳೆ) ಗುಡುಗು ಸಹಿತ ಭಾರಿ ಮಳೆಯಾಗುವ (64.5-115.5 ಮಿಮೀ) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮ್ಯಾಂಡಸ್ ಚಂಡಮಾರುತದ ಹಿನ್ನೆಲೆ ರಾಜ್ಯದಲ್ಲಿ ಡಿ.16 ರವರೆಗೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 16 ರವರೆಗೆ ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ, ಬಳ್ಳಾರಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸೋಮವಾರ ಸಂಜೆ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ.