ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30ರಿಂದ ಸೆಪ್ಟೆಂಬರ್ 2 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 30 ರಿಂದ ಸೆಪ್ಟೆಂಬರ್ 2 ರವರೆಗೆ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ 64.5 ರಿಂದ 115.5 ಮಿಮಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.