Home ಸುದ್ಧಿಗಳು ಪ್ರಾದೇಶಿಕ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

315
0

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ, ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ http://www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.