Tuesday, November 26, 2024
Tuesday, November 26, 2024

ಐ.ಎ.ಎಸ್./ಕೆ.ಎ.ಎಸ್ ಪರೀಕ್ಷೆಗೆ ಜಿಲ್ಲಾಡಳಿತದಿಂದ ಉಚಿತ ತರಬೇತಿ

ಐ.ಎ.ಎಸ್./ಕೆ.ಎ.ಎಸ್ ಪರೀಕ್ಷೆಗೆ ಜಿಲ್ಲಾಡಳಿತದಿಂದ ಉಚಿತ ತರಬೇತಿ

Date:

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಭಾರತೀಯ ನಾಗರೀಕ ಸೇವಾ ಪರೀಕ್ಷೆ (ಯುಪಿಎಸ್‌ಸಿ) ಮತ್ತು ಕರ್ನಾಟಕ ನಾಗರೀಕ ಸೇವಾ ಪರೀಕ್ಷೆ (ಕೆಪಿಎಸ್‌ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಜಿಲ್ಲಾಡಳಿತ ವತಿಯಿಂದ ತರಬೇತಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಕೊನೆಯ ವರ್ಷದ ಪದವಿಯನ್ನು (ಯಾವುದೇ ಪದವಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು, ಉದ್ಯೋಗದಲ್ಲಿರುವ / ನಿರುದ್ಯೋಗಿ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಾಗಿರುತ್ತಾರೆ.

ಉಡುಪಿ ನಗರದ ಸಾರ್ವಜನಿಕ ಗ್ರಂಥಾಲಯನ್ನು ತರಬೇತಿ ಕೇಂದ್ರವಾಗಿಸಿಕೊಂಡು, ನಿಗದಿಯಾಗಿರುವ ಪಠ್ಯಾನುಸಾರ ತರಗತಿಗಳು, ಗ್ರಂಥಾಲಯ, ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪತ್ರಿಕೆಗಳು, ನಿಯತಕಾಲಿಕೆಗಳು, ಅಂರ್ತಜಾಲದ ವ್ಯಾಪಕ ಬಳಕೆ, ಗುಂಪು ಚರ್ಚೆಗಳು, ಇತ್ಯಾದಿ ಮೂಲಸೌಕರ್ಯ ಮತ್ತು ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು.

ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಯುಪಿಎಸ್‌ಸಿ/ ಕೆಪಿಎಸ್‌ಸಿ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳಿಗೆ ಆನ್‌ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು http://udupi.nic.in ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!