ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ ವಿಷಯಗಳಲ್ಲಿ ಮಾತ್ರ ನೈಪುಣ್ಯರಾಗದೆ ಹೊಸ ಹೊಸ ವಿಷಯಗಳನ್ನು ಅನ್ವೇಷಿಸುತ್ತಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಇಂಗ್ಲಿಷ್ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ‘ಗ್ಲಿಸ್ಟನ್ ಸಾಹಿತ್ಯ ವೇದಿಕೆ’ ಮತ್ತು ‘ಇಂಗ್ಲಿಷ್ ಪ್ರಾಕ್ಟಿಸ್ ಸರ್ಟಿಫಿಕೇಟ್ ಕೋರ್ಸ್’ ಹಾಗೂ ‘ಆಳ್ವಾಸ್ ಇಂಗ್-ಗೈಡ್’ ಯೂಟ್ಯೂಬ್ ಚಾನೆಲ್ ಅನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಯನ್ನು ಸುಲಭಗೊಳಿಸಲು ಈ ಚಾನೆಲ್ ಸಹಾಯಕವಾಗಲಿದೆ ಎಂದರು. ನಮ್ಮನ್ನು ನಾವೇ ಸರ್ವ ರೀತಿಯಲ್ಲಿ ಧೃಡಗೊಳಿಸಲು ಸಂವಹನ ಸಹಕಾರಿಯಾಗಿದೆ. ಪರಿಣಾಮಕಾರಿ ಸಂವಹನವು ಭಾಷಾ ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಕರ್ಜೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕ ರಾಜೇಶ್ ಆನಂದ್ ಮಾತನಾಡಿ, ಸಾಹಿತ್ಯ ಮತ್ತು ಭಾಷೆ ಎರಡು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಸಾಹಿತ್ಯವು ಭಾಷಾ ಪರಿಪೂರ್ಣತೆಯನ್ನು ಹೆಚ್ಚಿಸುತ್ತದೆ. ಭಾಷೆಯಿಂದ ಆಲಿಸುವ ಮತ್ತು ಮಾತನಾಡುವ ಕೌಶಲ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ ‘ಆಳ್ವಾಸ್ ಇಂಗ್- ಗೈಡ್’ ಯೂಟ್ಯೂಬ್ ಚಾನೆಲ್ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ. ಈ ಭಾಗದ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಉತ್ತೇಜಿಸುವ ನಿಟ್ಟಿನಲ್ಲಿ ಸಹಾಯಕಾವಾಗಲಿದೆ ಎಂದರು. ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ, ರಿಜಿಸ್ಟಾçರ್ (ಅಕಾಡೆಮಿಕ್ಸ್) ಡಾ ಟಿ. ಕೆ. ರವೀಂದ್ರನ್, ಪದವಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಮಚ್ಛೇಂದ್ರ ಬಿ. ಇದ್ದರು. ವಿದ್ಯಾರ್ಥಿ ವೈಭವ್ ಕಾರ್ಯಕ್ರಮ ನಿರೂಪಿಸಿದರು. ಶಿಶಿರ್ ಶೆಟ್ಟಿ ವಂದಿಸಿದರು.