ಕಾಡೂರು ಗ್ರಾಮ ಪಂಚಾಯತ್ ವತಿಯಿಂದ ಹಸಿರು ನನ್ನೂರು-ನಡೂರು ಕಾರ್ಯಕ್ರಮ ನಡೆಯಿತು. ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗಿಡಮರಗಳ ರಕ್ಷಣೆ ಮತ್ತು ಪೋಷಣೆಯ ಮೂಲಕ ಹಸಿರೀಕರಣದ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ನಿರ್ವಹಿಸಬೇಕಾದ ಅಗತ್ಯತೆಯಿದೆ.
ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ವೃಕ್ಷಾರೋಪಣ ಮತ್ತು ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಕ್ರಿಯಾಶೀಲತೆಯಿಂದ ತೊಡಗಿಸಿಕೊಳ್ಳಬೇಕು. ಸುಸ್ಥಿರ ಅಭಿವೃದ್ಧಿಯ ಪರಿಕಲ್ಪನೆ ಸಾಕಾರಗೊಳಿಸಲು ಅರಣ್ಯ ಸಂರಕ್ಷಣೆ ಮೊದಲು ನಡೆಯಬೇಕು ಎಂದರು.
ಬ್ರಹ್ಮಾವರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಹೆಚ್. ವಿ. ಇಬ್ರಾಹಿಂ, ಕಾಡೂರು ಪಂ. ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ, ಅಧ್ಯಕ್ಷ ಪಾಂಡುರಂಗ ಶೆಟ್ಟಿ, ಉಪಾಧ್ಯಕ್ಷೆ ಅಮಿತಾ, ಸದಸ್ಯರಾದ ವಿಜಯ ಮರಕಾಲ, ಗುಲಾಬಿ, ವೀಣಾ, ಗಿರೀಶ್ ರಾವ್, ಸತೀಶ್, ಜಲಂಧರ್, ಗಿರಿಜಾ, ಅಮ್ಮಣ್ಣಿ, ಪ್ರಭಾವತಿ, ಗ್ರಾಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಎಸ್.ಎಲ್.ಆರ್.ಎಮ್ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.