Wednesday, January 22, 2025
Wednesday, January 22, 2025

ಉಡುಪಿ, ದಕ್ಷಿಣ ಕನ್ನಡ: ವಿವಿಧೆಡೆ ಸಂಭ್ರಮದ ಸ್ವಾತಂತ್ರ್ಯೋತ್ಸವ

ಉಡುಪಿ, ದಕ್ಷಿಣ ಕನ್ನಡ: ವಿವಿಧೆಡೆ ಸಂಭ್ರಮದ ಸ್ವಾತಂತ್ರ್ಯೋತ್ಸವ

Date:

ಉಡುಪಿ, ಆ. 15: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 77ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಉಡುಪಿ ಪತ್ರಿಕಾ ಭವನ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷ ಅಲೆವೂರು ದಿನೇಶ್ ಕಿಣಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ವಾರ್ತಾಧಿಕಾರಿ ಮಂಜುನಾಥ ಬಿ., ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ವಾರ್ತಾ ಸಹಾಯಕ ಶಿವಕುಮಾರ್ ಬಿ., ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ, ಪತ್ರಕರ್ತರಾದ ಶಶಿಧರ್ ಮಸ್ತಿಬೈಲು, ಮೈಕಲ್ ರೋಡಿಗ್ರಸ್, ಪರೀಕ್ಷಿತ್ ಶೇಟ್‌, ಹರೀಶ್ ಕುಂದರ್, ಅಶ್ವಥ್ ಆಚಾರ್ಯ, ರಿಚರ್ಡ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಧ್ವಜರೋಹಣವನ್ನು ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೇರವೇರಿಸಿದರು. ಸೌಹಾರ್ದ ಸಮಬಾಳ್ವೆ ನಮ್ಮ ಬದುಕಾಗಿ ಜೀವನ ರೂಪಿಸಿಕೊಳ್ಳಬೇಕು ಎಂದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಪಿ.ಡಿ.ಓ ರವೀಂದ್ರರಾವ್, ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷರಾದ ವೆಂಕಟೇಶ್ ಆಚಾರ್ಯ, ಜೆ.ಸಿ.ಐ ಕಲ್ಯಾಣಪುರ ಅಧ್ಯಕ್ಷೆ ಅನಿತಾ ನರೇಂದ್ರ, ಕಾರಂತ, ಪ್ರತಿಷ್ಠಾನದ ಟ್ರಸ್ಟಿಗಳಾದ ಸುಬ್ರಾಯ ಆಚಾರ್ಯ, ಇಬ್ರಾಹೀಂ ಸಾಹೇಬ್ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರು, ರೋಟರಿ ಕ್ಲಬ್ ಕೋಟ ಸಿಟಿ ಸದಸ್ಯರು, ಥೀಂ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಡುಪಿ ಜ್ಞಾನಸುಧಾ: ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಅಸೋಸಿಯೇಟ್ ಪ್ರೊಫೆಸರ್ ಡಾ.ಶ್ರುತಿ ಆಚಾರ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವಧನ ವಿತರಿಸಲಾಯಿತು. ಪ್ರಾಂಶುಪಾಲ ಗಣೇಶ್, ಉಪಪ್ರಾಂಶುಪಾಲ ಸಂತೋಷ್, ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಕೀರ್ತಿ ಹರೀಶ್ ಕಾರ್ಯಕ್ರಮ ನಿರೂಪಿಸಿದರು.

ಎಚ್.ಎಮ್.ಎಮ್‌ ವಿ.ಕೆ.ಆರ್ ಶಾಲೆ: ಬಿ. ಎಂ ಸುಕುಮಾರ ಶೆಟ್ಟಿ ನೇತೃತ್ವದ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್‌ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕ ಕೆ. ಪರಮೇಶ್ವರ ಉಡುಪ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯ ಶಿಕ್ಷಕರು, ಬೋಧಕ – ಬೋಧಕೇತರ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಮೃದ್ದಿ ಯುವಕ ಮಂಡಲ: ಸಮೃದ್ದಿ ಯುವಕ ಮಂಡಲ(ರಿ) ಕುಳ್ಳಂಜೆ ಅಧ್ಯಕ್ಷರಾದ ಗಣೇಶ ತಲ್ಲಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಅಂಚೆ ಅಧಿಕಾರಿ ರಾಮಚಂದ್ರ ನಾಯ್ಕ ಬಾಳೆಕೊಡ್ಲು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ವಿವಿಧ ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಯೋಗೀಶ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು, ಗಣೇಶ ತಲ್ಲಂಜೆ ಸ್ವಾಗತಿಸಿ, ಕಾರ್ಯದರ್ಶಿ ನಿತಿನ್ ಕುಮಾರ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು, ನಾರಾಯಣ ಟಿ ವಂದಿಸಿದರು.

ಪುತ್ತಿಗೆ ಮಠ: ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿದರು. ಶ್ರೀಮಠದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಂಕರನಾರಾಯಣ ಅಂಚೆ ಕಛೇರಿ: ಶಂಕರನಾರಾಯಣ ಅಂಚೆ ಕಛೇರಿ ಅಂಚೆ ಪಾಲಕರಾದ ಚೇತನಾ ಶ್ರೀಧರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಚೆ ವಿತರಕರು ಹಾಗೂ ಹಿರಿಯರಾದ ರಾಮ ಹಾಂಡ ಧ್ವಜಾರೋಹಣ ನೆರವೇರಿಸಿದರು. ಶ್ರೀಧರ್ ತಂತ್ರಾಡಿ, ರತ್ನ ರಾಮಚಂದ್ರ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಕಿರಣ್ ಹೆಗ್ಡೆ, ಅಂಚೆ ಸಹಾಯಕರಾದ ನಾಗರಾಜ ನಾಯ್ಕ, ಮೇಲ್ವಿಚಾರಕರಾದ ನಂದೀಶ್, ಉಪ ಅಂಚೆ ಕಛೇರಿ ಸಿಬ್ಬಂದಿ, ಶಾಖಾ ಅಂಚೆ ಕಛೇರಿ ಸಿಬ್ಬಂದಿ ಮುಂತಾದವರು ಉಪಸ್ಥಿತರಿದ್ದರು.

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಕಾಲೇಜಿನ ಪಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಹರೀಶ್ ಬಿ., ಶರತ್ ಕುಮಾರ್, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಬೋಧಕ- ಬೋಧಕೇತರ ಶಿಬ್ಬಂದಿಗಳು, ಎನ್.ಸಿ.ಸಿ., ಎನ್.ಎಸ್.ಎಸ್. ಹಾಗೂ ರೇಂಜರ್ಸ್ ರೋವರ್ಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎನ್.ಸಿ.ಸಿ. ಕೆಡೆಟ್ ದಿವ್ಯಾ ಅವರಿಂದ ರೈಫಲ್ ಶೂಟಿಂಗ್ ಪ್ರಾತ್ಯಕ್ಷಿಕೆ ನಡೆಯಿತು.

ಯುವಕ ಮಂಡಲ(ರಿ.) ಇರಾ: ಯುವಕ ಮಂಡಲದ ಅಧ್ಯಕ್ಷರಾದ ಗಣೇಶ್ ಎಸ್ ಅತ್ತಾವರ ಧ್ವಜಾರೋಹಣ ನೆರವೇರಿಸಿದರು. ಸಂಘದ ಹಿರಿಯ ಸದಸ್ಯರಾದ ಯತಿರಾಜ ಶೆಟ್ಟಿ ‌ಕಾರ್ಯಕ್ರಮ ನಿರೂಪಿಸದರು. ಯುವಕ ಮಂಡಲದ ಸುವರ್ಣ ಮಹೋತ್ಸವದ ಸಮಿತಿಯ ಅಧ್ಯಕ್ಷರಾದ ಜಯರಾಮ್ ‌ಪೂಜಾರಿ‌ ಸೂತ್ರಬೈಲು ಹಾಗು ಸಂಘದ ‌ಎಲ್ಲಾ ಸದಸ್ಯರು, ಇರಾ ಗ್ರಾಮ ಪಂಚಾಯತ್ ಸದಸ್ಯರು, ಇರಾ ಶಾಲಾ ಅಧ್ಯಾಪಕ ವೃಂದ, ಆಡಳಿತ ಮಂಡಳಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚೈತನ್ಯ ಮಿತ್ರ ಮಂಡಳಿ ಕಲ್ಯಾ: ಚೈತನ್ಯ ಮಿತ್ರ ಮಂಡಳಿ, ಚೈತನ್ಯ ಮಹಿಳಾ ಮತ್ತು ಯುವತಿ ಮಂಡಲ ಕಲ್ಯಾ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೈತನ್ಯ ಮಹಿಳಾ ಮತ್ತು ಯುವತಿ ಮಂಡಲದ ಅಧ್ಯಕ್ಷೆ ಶಕುಂತಲಾ ಬಂಗೇರ ಧ್ವಜಾರೋಹಣ ನೆರವೇರಿಸಿದರು. ಚೈತನ್ಯ ಮಿತ್ರ ಮಂಡಳಿಯ ಗೌರವಾಧ್ಯಕ್ಷರಾದ ಅಶೋಕ್ ಎಸ್ ಪೂಜಾರಿ. ಯತೀಶ್ ಎನ್., ಮಂಜುನಾಥ ಕನ್ಸ್ಟ್ರಕ್ಷನ್ ನ ಮಾಲಕರಾದ ರೇಣು. ಚೈತನ್ಯ ಮಹಿಳಾ ಮತ್ತು ಯುವತಿ ಮಂಡಲದ ಸ್ಥಾಪಕ ಅಧ್ಯಕ್ಷರಾದ ರೂಪಾ ಯತೀಶ್. ಧೀರಾಜ್ ಶೆಟ್ಟಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

ಎಸ್.ವಿ.ಎಸ್, ತ್ರಿಶಾ ಸಂಸ್ಥೆ ಕಟಪಾಡಿ: ಎಸ್.ವಿ.ಎಸ್ ವಿದ್ಯಾವರ್ಧಕ ಸಂಘ ಹಾಗೂ ತ್ರಿಶಾ ಸಂಸ್ಥೆಯ ವತಿಯಿಂದ ಕಟಪಾಡಿಯ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಸಂಚಾಲಕರಾದ ಸತ್ಯೇಂದ್ರ ಪೈ, ತ್ರಿಶಾ ಸಂಸ್ಥೆಗಳ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್, ತ್ರಿಶಾ ವಿದ್ಯಾ ಕಾಲೇಜು, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು, ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಎಸ್.ವಿ.ಎಸ್ ಕನ್ನಡ ಮಾಧ್ಯಮ, ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಂಗಳೂರು ಕೆನರಾ ವಿಕಾಸ್ ಸಮೂಹ ಸಂಸ್ಥೆ: ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಿಟ್ಟೆ ಯೂನಿವರ್ಸಿಟಿಯ ಮಾಜಿ ಉಪಕುಲಪತಿ ಹಾಗೂ ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್ ನ ಉಪಾಧ್ಯಕ್ಷ ಪ್ರೊ.ಡಾ. ಸತೀಶ್ ಕುಮಾರ್ ಭಂಡಾರಿ, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜಕರಾದ ಬಸ್ತಿ ಪುರುಷೋತ್ತಮ್ ಶೆಣೈ, ಕೆನರಾ ಹೈ ಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮ್ಯಾನೇಜರ್ ರಾಘವೇಂದ್ರ ಕುಡ್ವ, ಕೆನರಾ ವಿಕಾಸ್ ಕಾಲೇಜಿನ ಕ್ಯಾಂಪಸ್ ಸಂಯೋಜಕರಾದ ಪಾರ್ಥಸಾರಥಿ ಜೆ ಪಾಲೆಮಾರ್, ಕೆನರಾ ವಿಕಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ., ಕೆನರಾ ವಿಕಾಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಸುಗುಣಾ ನಾಯಕ್, ಕೆನರಾ ವಿಕಾಸ್ ಫಿಸಿಯೋ ಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ.ನಿತಿನ್ ಚಂದ್ರ ಕಿಣಿ ಉಪಸ್ಥಿತರಿದ್ದರು. ವರ್ಷಾ ಮೌರ್ಯ ಸ್ವಾಗತಿಸಿ, ಶೈನಾ ಪೂಜಾರಿ ವಂದಿಸಿದರು. ಪಾವನಶ್ರೀ ಪ್ರಿಯಾಂಕ ಗುಪ್ತ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!