Monday, January 20, 2025
Monday, January 20, 2025

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ

Date:

ಉಡುಪಿ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ– 2022ರಂತೆ ವೇಳಾಪಟ್ಟಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದ್ದು, ಮತದಾರರ ಪಟ್ಟಿಯ ಪೂರ್ವ ಪರಿಷ್ಕರಣೆ ಚಟುವಟಿಕೆಗಳು ಅಕ್ಟೋಬರ್ 31ರವರೆಗೆ ನಡೆಯಲಿದ್ದು, ನವೆಂಬರ್ 1 ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ.

ನವೆಂಬರ್ 1 ರಿಂದ 30 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಡಿಸೆಂಬರ್ 20 ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, 2022 ರ ಜನವರಿ 5 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಅರ್ಹ ಭಾರತೀಯ ನಾಗರಿಕರು ಮತದಾರರರ ಪಟ್ಟಿಗೆ ಹೆಸರುಗಳನ್ನು ಸೇರಿಸಲು ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 01.01.2022 ಕ್ಕೆ 18 ವರ್ಷ ಪೂರ್ಣಗೊಳ್ಳಲಿರುವವರು ಈ ಕೆಳಗೆ ತಿಳಿಸಿರುವ ಯಾವುದಾದರೊಂದು ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ ಕಾರ್ಡ್, ಎಸ್.ಎಸ್.ಎಲ್.ಸಿ/ಪಿ.ಯು.ಸಿ.ಅಂಕಪಟ್ಟಿಗಳು, ಪಾನ್ ಕಾರ್ಡು ಹಾಗೂ ವೈದ್ಯಕೀಯ ಪ್ರಮಾಣ ಪತ್ರ.

ವಾಸ್ತವ್ಯದ ಬಗ್ಗೆ ದಾಖಲೆಗಳು: ಪಡಿತರ ಚೀಟಿ, ಗ್ಯಾಸ ಸಿಲಿಂಡರ್ ರಸೀದಿ ಸ್ವೀಕೃತಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್, ವಾಹನ ಚಾಲನಾ ಪರವಾನಗಿ ಪ್ರತಿ, ಬಾಡಿಗೆ ಕರಾರು ಪತ್ರ, ಹಾಗೂ ಇನ್ನಿತರ ದಾಖಲೆಗಳು.

ನಮೂನೆ- 6: 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದೆಡೆ ವಾಸಸ್ಥಳ ಬದಲಾಯಿಸುವವರು, ವಿದೇಶದಲ್ಲಿ ವಾಸಿಸುವವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು.

ನಮೂನೆ – 6A: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು.

ನಮೂನೆ – 7: ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು.

ನಮೂನೆ–8: ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದಂತೆ ದೋಷಗಳಿದ್ದರೆ.

ನಮೂನೆ–8A: ಒಂದು ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಾದ ಅರ್ಜಿ.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರರ ಪಟ್ಟಿಗೆ ಹೆಸರು ನೋಂದಾಯಿಸುವ ಬಗ್ಗೆ ಮತ್ತು ತಿದ್ದುಪಡಿ ಮಾಡುವ ಬಗ್ಗೆ, ತಾಲೂಕು ಕಛೇರಿ ಉಡುಪಿ,ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ ಹೆಬ್ರಿ ಇಲ್ಲಿಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು.

ಸಾರ್ವಜನಿಕರು ಮತದಾರರರ ಪಟ್ಟಿಗೆ ಹೆಸರು ನೋಂದಾಯಿಸುವ ಬಗ್ಗೆ ಮತ್ತು ತಿದ್ದುಪಡಿ ಮಾಡುವ ಬಗ್ಗೆ ಮಾಹಿತಿಗಾಗಿ, ಜಿಲ್ಲಾಧಿಕಾರಿಯವರ ಕಛೇರಿ 0820- 2574991, 0820 – 2574925. ಕೆ. ರಾಜು ಸಹಾಯಕ ಕಮೀಷನರ್, ಕುಂದಾಪುರ ಹಾಗೂ ಮತದಾರರರ ನೋಂದಣಾಧಿಕಾರಿ, ಉಡುಪಿ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳು 08254-231984, ಶೋಭಾ ಲಕ್ಷ್ಮಿ ಹೆಚ್. ಎಸ್. ತಹಶೀಲ್ದಾರರು ಬೈಂದೂರು ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ, ಬೈಂದೂರು ವಿಧಾನಸಭಾ ಕ್ಷೇತ್ರ 08254-251657, ಕಿರಣ್ .ಜಿ. ಗೌರಯ್ಯ ತಹಶೀಲ್ದಾರರು ಕುಂದಾಪುರ ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರ 08254-230357, ಪ್ರದೀಪ್ ಕುರ್ಡೇಕರ್, ತಹಶೀಲ್ದಾರರು ಉಡುಪಿ ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ, ಉಡುಪಿ ವಿಧಾನಸಭಾ ಕ್ಷೇತ್ರ 0820-2520417, ರಾಜಶೇಖರ ಮೂರ್ತಿ, ತಹಶೀಲ್ದಾರರು ಬ್ರಹ್ಮಾವರ ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ, ಕಾಪು ವಿಧಾನಸಭಾ ಕ್ಷೇತ್ರ 0820-2560494 ಪ್ರಕಾಶ್.ಎಸ್. ಮರಬಳ್ಳಿ, ತಹಶೀಲ್ದಾರರು ಕಾರ್ಕಳ ಹಾಗೂ ಸಹಾಯಕ ಮತದಾರರರ ನೋಂದಣಾಧಿಕಾರಿ, ಕಾರ್ಕಳ ವಿಧಾನಸಭಾ ಕ್ಷೇತ್ರ 08258-230201, ತಹಶೀಲ್ದಾರ್ ಕಛೇರಿ, ಕಾಪು ತಾಲೂಕು 0820-2591444,ತಹಶೀಲ್ದಾರ್ ಕಛೇರಿ, ಹೆಬ್ರಿ ತಾಲೂಕು 08253-250201 ಇವರನ್ನು ಅಥವಾ ವ್ಯಕ್ತಿಯು ವಾಸವಿರುವ ವಿಳಾಸದ ವ್ಯಾಪ್ತಿಗೆ ಬರುವ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO)ಗಳನ್ನು ಭೇಟಿಯಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿದಾರರು ಆನ್ ಲೈನ್ ಮೂಲಕ ವೆಬ್ ಪೋರ್ಟಲ್ http://www.ceokarnataka.nic.in ಮತ್ತು http://www.nvsp.in ಹಾಗೂ Voter Help Line App ನಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಹಾಗೂ ತಿದ್ದುಪಡಿಗಳಿಗಾಗಿ ಅವಕಾಶವಿರುತ್ತದೆ, ಹಾಗೂ ಮತದಾರರ ಸಹಾಯವಾಣಿ ಕೇಂದ್ರ ಸಂಖ್ಯೆ 1950 (ಟೋಲ್ ಫ್ರೀ ನಂ.) ಗೆ ಕರೆ ಮಾಡಿ ಕೂಡ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!