ಉಡುಪಿ ನಗರ ಪ್ರದೇಶದಲ್ಲಿ ನಾಳೆ (ಜೂನ್ 30) ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯ ಇರುವುದಿಲ್ಲ.
ದಿನಾಂಕ 30/06/2021 ರಂದು ಉಡುಪಿ ನಗರ ಪ್ರದೇಶದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ವಿದೇಶ ಪ್ರಯಾಣ ಮಾಡುವವರಿಗೆ ಲಸಿಕೆ ಲಭ್ಯವಿರುವುದಿಲ್ಲ.
ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.