Monday, April 27, 2026
Monday, April 27, 2026

ಕೋವಿಡ್ ಸೋಂಕಿತರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಜಿಲ್ಲಾಧಿಕಾರಿ ಆದೇಶ

ಕೋವಿಡ್ ಸೋಂಕಿತರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಜಿಲ್ಲಾಧಿಕಾರಿ ಆದೇಶ

Date:

ಉಡುಪಿ: ಜಿಲ್ಲೆಯಲ್ಲಿ ಕರೋನಾ ಸೋಂಕಿನ ಸರಪಳಿಯನ್ನು ತುಂಡರಿಸಿ, ಕೋವಿಡ್ 19 ವೈರಾಣುವಿನ ಹರಡುವಿಕೆಯನ್ನು ತಗ್ಗಿಸಿ, ಜಿಲ್ಲೆಯು ಜನರು ಕೋವಿಡ್ -19 ರ ಭಾದೆಗೆ ಒಳಗಾಗದಂತೆ ತಪ್ಪಿಸಲು, ಆಗಸ್ಟ್ 5ರ ಗುರುವಾರದಿಂದ, ಕೋವಿಡ್-19 ಪಾಸಿಟಿವ್ ವ್ಯಕ್ತಿಗಳನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ಯಾರಂಟೈನ್ (Covid Care Centre) ಗೆ ಸ್ಥಳಾಂತರಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

ಅಂತಹ ರೋಗಿಗಳ ಸ್ಥಳಾಂತರವನ್ನು ತಡೆಯುವ, ವಿರೋಧಿಸುವ, ಪ್ರತಿರೋಧಿಸುವ ಯಾವುದೇ ವ್ಯಕ್ತಿಯ ಅಥವಾ ರೋಗಿಯ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005, ಸಾಂಕ್ರಾಮಿಕ ನಿಯಂತ್ರಣ ಕಾಯ್ದೆ 2020 ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಗರ್ಭಿಣಿಯರು, ಅಶಕ್ತರು, ಹಾಗೂ ಇತರ ವಿಶೇಷ ಪ್ರಕರಣಗಳಿದ್ದಲ್ಲಿ, ಅಂತಹವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡುವ ಬಗ್ಗೆ ಸಂಬಂಧಿಸಿದ ತಹಶೀಲ್ದಾರರು ಹಾಗೂ ತಾಲೂಕು ಆರೋಗ್ಯ ವೈದ್ಯಾಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!