Home ಸುದ್ಧಿಗಳು ಪ್ರಾದೇಶಿಕ ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ವಿವಿ...

ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ವಿವಿ ಮಟ್ಟದ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆ

299
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಯೊಂದಿಗೆ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಇವರು ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಕಿಶೋರ್ ಕುಮಾರ್ ಸಿ.ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜೀವನಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಪರಿವೀಕ್ಷಕರಾಗಿ ಮಂಗಳೂರು ವಿವಿ ಕ್ರೀಡಾ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ. ಪ್ರಸನ್ನ ಬಿ.ಕೆ. ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಧಾಕರನ್ ಟಿ., ಕಾರ್ಯಕ್ರಮದ ಸಂಯೋಜಕರಾದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಮೊಹಮ್ಮದ್ ರಫೀಕ್ ಹಾಗೂ ಮಂಗಳೂರು ವಿ.ವಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೊಹಮ್ಮದ್ ರಫೀಕ್ ಸ್ವಾಗತಿಸಿ, ವಿನಾಯಕ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಹಲವು ವಿಭಾಗಗಳಲ್ಲಿ ಯೋಗಾಸನ ಸ್ಪರ್ಧೆ ನಡೆಯಿತು.

ಸಮಾರೋಪ ಸಮಾರಂಭ:
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ರಾಜ್ಯಯೋಗ ಸಂಘಟಕ ಮತ್ತು ಸಾಧಕರಾದ ಶೇಖರ ಕಡ್ತಾಲ ಮಾತನಾಡಿ, ಯೋಗದ ಮಹತ್ವ ಹಾಗೂ ಯೋಗಾಭ್ಯಾಸಕ್ಕೆ ಪ್ರಸ್ತುತ ಕಾಲಘಟ್ಟದಲ್ಲಿ ಸಿಗುತ್ತಿರುವ ಜನಪ್ರಿಯತೆ ಬಗ್ಗೆ ಸಭಿಕರಲ್ಲಿ ಅರಿವು ಮೂಡಿಸಿದರು.

ಡಾ. ಜೆರಾಲ್ಡ್ ಸಂತೋಷ್ ಡಿಸೋಜ ಹಾಗೂ ಡಾ. ಪ್ರಸನ್ನ ಬಿ.ಕೆ ಇವರು ತಮ್ಮ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ರಾಜೇಂದ್ರ ಕುಮಾರ್ ಮತ್ತು ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಮೊಹಮ್ಮದ್ ರಫೀಕ್ ವಿಜೇತರ ಪಟ್ಟಿಯನ್ನು ವಾಚಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಅಧ್ಯಕ್ಷತೆ ವಹಿಸಿದರು.

ಫಲಿತಾಂಶ:
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ವಿವಿಧ ಕಾಲೇಜುಗಳಿಂದ ೨೧ ಯೋಗಾಸನ ತಂಡಗಳು ಭಾಗವಹಿಸದ್ದು, ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿಶ್ವವಿದ್ಯಾನಿಲಯ ಕಾಲೇಜು ಕೊಣಾಜೆ, ದ್ವಿತೀಯ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡಬಿದ್ರೆ, ತೃತೀಯ ಸ್ಥಾನವನ್ನು ಎಸ್.ಡಿ.ಎಮ್ ಕಾಲೇಜು ಉಜಿರೆ ಇವರು ಪಡೆದುಕೊಂಡಿರುತ್ತಾರೆ ಹಾಗೂ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿಶ್ವವಿದ್ಯಾನಿಲಯ ಕಾಲೇಜು ಕೊಣಾಜೆ, ದ್ವಿತೀಯ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡಬಿದ್ರೆ, ತೃತೀಯ ಸ್ಥಾನವನ್ನು ಎಸ್.ಡಿ.ಎಮ್ ಕಾಲೇಜು ಉಜಿರೆ ಇವರು ಪಡೆದುಕೊಂಡಿರುತ್ತಾರೆ.

ಮಹಿಳೆಯರ ವೈಯುಕ್ತಿಕ ವಿಭಾಗದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಕೊಣಾಜೆ ಹಾಗೂ ಪುರುಷರ ವೈಯುಕ್ತಿಕ ವಿಭಾಗದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಕೊಣಾಜೆ, ದ್ವಿತೀಯ ಸ್ಥಾನವನ್ನು ಆಳ್ವಾಸ್ ಕಾಲೇಜು ಮೂಡಬಿದ್ರೆ ಇವರು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.