Tuesday, January 21, 2025
Tuesday, January 21, 2025

ಹಲಸು ಮೇಳ ಉದ್ಘಾಟನೆ

ಹಲಸು ಮೇಳ ಉದ್ಘಾಟನೆ

Date:

ಉಡುಪಿ: ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು.

ಅವರು ಇಂದು ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.

ರೈತರು ತಾವು ಬೆಳದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ ಮಾರಾಟ ಮಾಡಿ ಆರ್ಥಿಕ ನಷ್ಠವನ್ನು ಹೊಂದುತ್ತಿದ್ದರು. ಇವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂಧ ಹಲಸು, ಮಾವು ಸೇರಿದಂತೆ ಮತ್ತಿತರ ಉತ್ಪನ್ನಗಳ ಮೆಳಗಳನ್ನು ನಡೆಸುತ್ತಿದೆ. ರೈತ ಭಾಂಧವರು ಇಂತಹ ಮೇಳಗಳ ಲಾಭ ಪಡೆದುಕೊಳ್ಳಬೇಕು ಎಂದರು.

ಮೇಳದಲ್ಲಿ ತೂಬುಗೆರೆಯ ಹಲಸು, ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್ ಮುಂತಾದವುಗಳ ಮಾರಾಟವಿತ್ತು.

ಕಲ್ಪರಸ ಹಾಗೂ ಅದರ ಉತ್ಪನ್ನಗಳು, ಜಿಲ್ಲೆಯ ಅಪರೂಪದ ಬೆಳೆಗಳಲ್ಲೊಂದದ ರಂಬೂಟಾನ್ ಹಣ್ಣು, ಜೊತೆಗೆ ಶುದ್ಧ ಜೇನುತುಪ್ಪವು ಲಭ್ಯವಿತ್ತು.

ಕಾರ್ಯಕ್ರಮದಲ್ಲಿ ಸಿಇಓ ಪ್ರಸನ್ನ ಎಚ್. ಮಾತನಾಡಿ, ಸರ್ಕಾರ ಹಲಸು ಬೆಳೆಗೆ ಪ್ರೋತ್ಸಾಹ ನೀಡಲು ಅನೇಕ ಯೋಜನೆಗಳನ್ನು ರೂಪಿಸಲು ಚಿಂತಿಸಿದೆ ಅದರ ಭಾಗವಾಗಿ ಹಲಸು ಮೇಳವು ಒಂದಾಗಿದೆ. ಸಾರ್ವಜನಿಕರು ತಮಗೆ ಇಷ್ಠವಾದ ನಮೂನೆಯ ಹಲಸನ್ನು ಮೇಳಗಳಲ್ಲಿ ಕಡಿಮೆ ದರದಲ್ಲಿ ಖರೀದಿಸಬಹುದಾಗಿದೆ.

ಈ ಮೇಳವು 2 ದಿನಗಳ ವರೆಗೆ ನಡೆಯಲಿದ್ದು, ರೈತರು ತಾವು ಬೆಳದ ಹಲಸನ್ನು ನೇರವಾಗಿ ಮಾರಾಟ ಮಾಡಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಮತ್ತಿರರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ: ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ, ಜ.21: ದಿನಾಂಕ 11.01.2025 ರಂದು ಇನ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್...

ಸೇವಾ ದಿನಾಚರಣೆ

ಗಂಗೊಳ್ಳಿ, ಜ.21: ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು....

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...
error: Content is protected !!