ಬಂಟ್ವಾಳ: ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇಂದು ಸಂಜೆ ಇರಾ ಶ್ರೀ ಸೋಮನಾಥೇಶ್ವರ ದೇವಳದ ವಠಾರದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಜಯರಾಜ್ ಡಿ ಶೆಟ್ಟಿ ಕುಂಡಾವು, ಉಪಾಧ್ಯಕ್ಷರಾಗಿ ಸೂರ್ಯಪ್ರಕಾಶ್ ರೈ, ಕಾರ್ಯದರ್ಶಿಯಾಗಿ ಪ್ರಸೀನ್ ಶೆಟ್ಟಿ ಆಚೆಬೈಲು, ಜತೆ ಕಾರ್ಯದರ್ಶಿಯಾಗಿ ಚಂದ್ರಹಾಸ ಶೆಟ್ಟಿ ಸಂಪಿಲ, ಖಜಾಂಚಿಯಾಗಿ ವರದರಾಜ ಎಂ ಆಯ್ಕೆಯಾದರು.
ಈ ಸಂದರ್ಭದಲ್ಲಿ ಊರಿನ ಗಣ್ಯರು ಹಾಗು ಇರಾ ಶ್ರೀ ಸೋಮನಾಥೇಶ್ವರ ದೇವಳದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.