Sunday, January 19, 2025
Sunday, January 19, 2025

ಜೇಸಿಐ ಉಡುಪಿ ಸಿಟಿ ಪದಪ್ರಧಾನ ಸಮಾರಂಭ

ಜೇಸಿಐ ಉಡುಪಿ ಸಿಟಿ ಪದಪ್ರಧಾನ ಸಮಾರಂಭ

Date:

ಉಡುಪಿ: ಜೇಸಿಐ ವಲಯ 15 ಇದರ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೇಸಿಐ ಉಡುಪಿ ಸಿಟಿ ಇದರ 2022 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭ ಡಿ.22 ರಂದು ಶಾರದ ಇಂಟರ್ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.

2021 ನೇ ಸಾಲಿನ ಅಧ್ಯಕ್ಷ ಉದಯ್ ನಾಯ್ಕ್ ರವರು ನೂತನ ಅಧ್ಯಕ್ಷ ಡಾ. ವಿಜಯ್ ನೆಗಳೂರು ರವರಿಗೆ ಅಧಿಕಾರ ಹಸ್ತಾಂತರಿಸಿದರು.

ಮುಖ್ಯ ಅತಿಥಿ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸದಾನಂದ ನಾವಡ ಮಾತನಾಡಿ, ಜಗತ್ತಿನ ಅತ್ಯಂತ ದೊಡ್ಡ ವ್ಯಕ್ತಿತ್ವ ವಿಕಸನ ಸಂಸ್ಥೆಯಾದ ಜೇಸಿಐ, ವಿವಿಧ ದೇಶಗಳಿಗೆ ನಾಯಕರುಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಸಂಸ್ಥೆಯ ಮೂಲಕ ವ್ಯಕ್ತಿತ್ವ ವಿಕಸನದೊಂದಿಗೆ ನಮ್ಮ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.

ವಲಯಾಧ್ಯಕ್ಷ ರೋಯನ್ ಉದಯ್ ಕ್ರಾಸ್ತಾ ಮಾತನಾಡಿ, ವಲಯದಲ್ಲಿ ವಿವಿಧ ರೀತಿಯ ವಿನೂತನ ಕಾರ್ಯಕ್ರಮಗಳು ನಡೆಯಲಿವೆ. ತರಬೇತಿ ಕಾಯ೯ಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಡೆಸುವ ಯೋಜನೆಯಿದೆ. ಇದಕ್ಕೆ ಘಟಕ ಸಹಕಾರ ನೀಡಬೇಕೆಂದರು.

ಮುಖ್ಯ ಅತಿಥಿಗಳಾದ ಉದ್ಯಮಿ ಪ್ರಭಾಕರ ಜಿ ಮತ್ತು ಗಿರಿಜಾ ಹೆಲ್ತ್ ಕೇರ್ ನ ರವೀಂದ್ರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಪೂರ್ವ ರಾಷ್ಟ್ರೀಯ ಉಪಾದ್ಯಕ್ಷ ಸಂದೀಪ್ ಕುಮಾರ್, ಪದ ಪ್ರಧಾನ ಅಧಿಕಾರಿ ವಲಯ ಉಪಾಧ್ಯಕ್ಷ ರವಿಚಂದ್ರ ಪಾಟಾಳಿ, ಕಾರ್ಯದರ್ಶಿ ಕಿರಣ್ ಭಟ್, ವೀಕ್ಷಿತ್, ನಯನ ಉದಯ್, ತನುಜಾ ಮಾಬೆನ್, ಯುವ ಜೇಸಿ ಅಧ್ಯಕ್ಷ ಸಮದುಡು ಮುಂತಾದವರಿದ್ದರು.

ನೂತನ ಅಧ್ಯಕ್ಷರು ತಮ್ಮ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಸದಸ್ಯರು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!