Tuesday, October 13, 2026
Tuesday, October 13, 2026

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಬಾಳಿಗಾ ಆಯ್ಕೆ

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ಬಾಳಿಗಾ ಆಯ್ಕೆ

Date:

ಉಡುಪಿ: ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 29ನೇ ವಾರ್ಷಿಕ ಮಹಾಸಭೆ ಸಂಘದ ಕೋಟೇಶ್ವರ ಗೋವಿಂದರಾಯ ವಿಠ್ಠಲ್ ಕಾಮತ್ ಸಭಾಂಗಣದಲ್ಲಿ ಜರಗಿತು. ಕೆ.ಕೆ. ಫಿಶ್ ನೆಟ್ ಕೋ. ಮಾಲಕ ಕೆ. ಪ್ರಶಾಂತ್ ಬಾಳಿಗಾ ಇವರು 2021-2022 ಸಾಲಿನ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಹರೀಶ್ ಕುಂದರ್, ಯು. ಅಜಿತ್ ಕುಮಾರ್ ಶೆಣೈ, ಎಂ. ವಸಂತ್ ಕಿಣಿ, ಕಾರ್ಯದರ್ಶಿಯಾಗಿ ಎಂ. ವಲ್ಲಭ್ ಭಟ್, ಕೋಶಾಧಿಕಾರಿಯಾಗಿ ಕೃಷ್ಣ ಪ್ರಸಾದ್, ಜೊತೆ ಕಾರ್ಯದರ್ಶಿಗಳಾಗಿ ಎಂ. ನೋಯೆಲ್ ವಂದೇಶ್ ಮಥಾಯಿಸ್, ವೆಂಕಟೇಶ್ ಆರ್ ಪೈ, ಯು. ಸುರೇಶ್ ಶೆಣೈ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಮಾಜಿ ಅಧ್ಯಕ್ಷರಾದ ಎಂ ಚಿತ್ತರಂಜನ್ ಭಟ್ ಮತ್ತು ಪೂರ್ವ ಅಧ್ಯಕ್ಷರು ಜತೆಗೂಡಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಗೌರವ ಸೂಚಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಎಂ. ವಿಶ್ವನಾಥ್ ಭಟ್, ವಿನ್ಸನ್ಟ್ ಪಿಂಟೋ, ಜಾನ್ ಡಿಸಿಲ್ವ ಶುಭ ಹಾರೈಸಿದರು.

ಸಂಘದ ಮಾಜಿ ಅಧ್ಯಕ್ಷರಾದ ಎಂ. ಗಣೇಶ್ ಕಿಣಿ ಹಾಗೂ ಜೊತೆ ಕಾರ್ಯದರ್ಶಿ ವೆಂಕಟೇಶ್ ಆರ್. ಪೈ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!