ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಅಂದೋಲನದಡಿ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 100 ಎಕರೆ ಹಡಿಲು ಭೂಮಿಯನ್ನು ಕೇದಾರೋತ್ಥಾನ ಟ್ರಸ್ಟ್ ಮೂಲಕ ಕೃಷಿ ಮಾಡಲಾಗುತ್ತಿದ್ದು, ಮಂಗಳವಾರ ಶಾಸಕ ಕೆ. ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈಗಾಗಲೇ ತೋಡುಗಳ ಹೂಳೆತ್ತಿ ಪುನಃಶ್ಚೇತನಗೊಳಿಸಲಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದೆ. ಈ ಭಾಗದಲ್ಲಿ ಸುಮಾರು 15 ಎಕರೆ ಹಡಿಲು ಭೂಮಿಯಲ್ಲಿ ನಾಟಿ ಕಾರ್ಯ ಮುಕ್ತಾಯಗೊಂಡಿದೆ. ಕೇದಾರೋತ್ಥಾನ ಟ್ರಸ್ಟ್ ಮೂಲಕ ಸ್ಥಳೀಯ ಕೃಷಿಕರಿಗೆ ಸಹಕಾರ ನೀಡಲಾಗುತ್ತಿದ್ದು, ಈ ವಿನೂತನ ಕಾರ್ಯಕ್ರಮಕ್ಕೆ ಸ್ಥಳೀಯ ಕೃಷಿಕರು, ಊರಿನ ಹಿರಿಯರು, ಭೂ ಮಾಲಕರು ನಮ್ಮೊಂದಿಗೆ ಕೈಜೋಡಿಸಿ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಾ ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ನಮಗೆ ಮತ್ತಷ್ಟು ಬಲ ನೀಡಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಈ ಸಂದರ್ಭದಲ್ಲಿ ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ದಿನಕರ್ ಬಾಬು, ನಗರ ಬಿಜೆಪಿ ಉಪಾಧ್ಯಕ್ಷರಾದ ಪ್ರದೀಪ್ ಚಂದ್ರ, ಸ್ಥಳೀಯರಾದ ಪ್ರಶಾಂತ್, ಉಮೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.