ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 100 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡೆಕಾರ್ ಬೈಲಿನಲ್ಲಿ 60 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ ಹಾಗೂ ಉದ್ಯಮಿ ಪುರುಷೋತ್ತಮ್ ಶೆಟ್ಟಿ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂಮಿಗೆ ಹಾಲನ್ನು ಅರ್ಪಿಸುವ ಮೂಲಕ ಯಂತ್ರ ನಾಟಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರು ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರಾದ ದಿನಕರ್ ಬಾಬು, ಉಡುಪಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಸ್ಥಳೀಯರಾದ ನಿರುಪಮಾ ಪ್ರಸಾದ್, ಪ್ರವೀಣ್ ಚಂದ್ರ, ರಿಕೇಶ್, ವಿಜಯ್ ಭಟ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಕಡೆಕಾರ್ ಗ್ರಾಮ ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಕೃಷಿಕರು ಉಪಸ್ಥಿತರಿದ್ದರು.