Monday, January 20, 2025
Monday, January 20, 2025

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಕಾಷ್ಠಶಿಲ್ಪ ಮೂರು ಜಿಲ್ಲೆಗಳಲ್ಲಿ ಪ್ರಥಮ: ಶಾಸಕ ಕೆ. ರಘುಪತಿ ಭಟ್

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಕಾಷ್ಠಶಿಲ್ಪ ಮೂರು ಜಿಲ್ಲೆಗಳಲ್ಲಿ ಪ್ರಥಮ: ಶಾಸಕ ಕೆ. ರಘುಪತಿ ಭಟ್

Date:

ಉಡುಪಿ: ಜೀರ್ಣೋದ್ಧಾರಗೊಳ್ಳುತ್ತಿರುವ ಉಡುಪಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆದ ಮರದ ಕೆತ್ತನೆ ಕೆಲಸದ ಮುಹೂರ್ತದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಹಲವಾರು ದೇವಸ್ಥಾನಗಳು ವೈಭವಯುತವಾಗಿ ಜೀರ್ಣೋದ್ಧಾರಗೊಂಡಿವೆ. ಆದರೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸುತ್ತುಪೌಳಿಯ ಕೆಂಪುಕಲ್ಲು ಗೋಡೆ ಕೆತ್ತನೆ ಕೆಲಸ ಮತ್ತು ಅದರ ನಡುವೆ ಕಪ್ಪುಕಲ್ಲಿನ ಆಧಾರ ಸ್ತಂಭಗಳು ಮತ್ತು ಕಪ್ಪುಕಲ್ಲಿನ ಕಿಟಕಿಗಳು ಈ ರೀತಿ ವಿಶಿಷ್ಟವಾಗಿ ಅತ್ಯಂತ ಸುಂದರವಾಗಿ ದೇವಾಲಯ ನಿರ್ಮಾಣವಾಗುತ್ತಿರುವುದು ಈ ಮೂರು ಜಿಲ್ಲೆಗಳಲ್ಲಿ ಪ್ರಥಮ ಎಂದು ಹೇಳಿದರು. ದೇವಸ್ಥಾನದ ಸುತ್ತುಪೌಳಿ ಮತ್ತು ಸುಬ್ರಹ್ಮಣ್ಯ ಗುಡಿಯ ತಳಪಾಯ ತನಕ ಕೆಲಸವನ್ನು ಗ್ರಾಮಸ್ಥರೇ ಸೇರಿ ಮಾಡಿರುವುದು ಅತ್ಯಂತ ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಜೆರ್ರಿ ವಿನ್ಸೆಂಟ್ ಡಯಾಸ್ ಮಾತನಾಡಿ ಸಮಗ್ರ ಅಭಿವೃದ್ಧಿಗೊಳ್ಳುತ್ತಿರುವ ಶ್ರೀ ದೇವಾಲಯಕ್ಕೆ ತಮ್ಮ ಸಂಸ್ಥೆಯಿಂದ ದೊಡ್ಡ ಕೊಡುಗೆ ನೀಡುವುದಾಗಿ ಹೇಳಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿಗಳಾದ ಸುಭಾಷ್ ಹೆಗ್ಡೆ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಗಣೇಶ ರಾವ್, ಪ್ರಧಾನ ಅರ್ಚಕರಾದ ದುರ್ಗಾಪ್ರಸಾದ್ ಉಪಾಧ್ಯ, ದೇವಸ್ಥಾನದ ಪವಿತ್ರ ಪಾಣಿ ಕುಂಜಿತ್ತಾಯ ಶ್ರೀನಿವಾಸ್ ಉಪಾಧ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಳದ ಸಹಾಯಕ ಅರ್ಚಕ ಸುರೇಶ್ ಆಚಾರ್ಯರ ಪುತ್ರ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಸಿ.ಎಸ್ ಅಭಿಜಿತ್ ಆಚಾರ್ಯರನ್ನು ಸನ್ಮಾನಿಸಲಾಯಿತು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ್ ಹೆಗ್ಡೆ ಸ್ವಾಗತಿಸಿ ವಿದ್ಯಾ ಶ್ಯಾಮಸುಂದರ್ ವಂದಿಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಉಡುಪಿಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರ್ವಹಿಸಿದರು. ಕಡಿಯಾಳಿ ಮಾತೃ ಮಂಡಳಿಯಿಂದ ದೇವರ ಸ್ತೋತೃಗಳ ಭಜನಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!