Friday, November 22, 2024
Friday, November 22, 2024

ಕಾಪು: ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ

ಕಾಪು: ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ

Date:

ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಐ.ಸಿ.ಟಿಯುಕ್ತ ಕ್ಲಾಸ್‌ರೂಮ್‌ಗಳ ಉದ್ಘಾಟನೆ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕದ ವಿದ್ಯಾರ್ಥಿಗಳಿಗೆ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಉಚಿತ ಟ್ಯಾಬ್ಲೆಟ್‌ ಪಿ.ಸಿ ವಿತರಣಾ ಕಾರ್ಯಕ್ರಮ ನಡೆಯಿತು.

ಕಾಪು ಶಾಸಕರು ಲಾಲಾಜಿ ಆರ್‌. ಮೆಂಡನ್‌ ರವರು ಐ.ಸಿ.ಟಿಯುಕ್ತ ಕ್ಲಾಸ್‌ರೂಮ್‌ ಗಳನ್ನು ಉದ್ಘಾಟಿಸಿ 2020-21 ನೇ ಸಾಲಿನ ಪ್ರಥಮ ವರ್ಷದ ಪದವಿಯ 10 ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್‌ಪಿ.ಸಿ ಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಅವರು, ಕರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರದ ಗುಣಮಟ್ಟ ವೃಧ್ಧಿಗಾಗಿ ಸರಕಾರವು ಮೊದಲ ಹಂತದಲ್ಲಿ ಪದವಿ ತರಗತಿಗಳನ್ನು ಐ.ಸಿ.ಟಿಯುಕ್ತಗೊಳಿಸುತ್ತಿದೆ. ಮತ್ತು ವಿದ್ಯಾರ್ಥಿಗಳ ಆನ್‌ಲೈನ್‌ ಶಿಕ್ಷಣಕ್ಕಾಗಿ ನೆರವಾಗುವಂತೆ ಉಚಿತ ಟ್ಯಾಬ್ಲೆಟ್‌ಗಳನ್ನು ವಿತರಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೊಳಿಸುತ್ತಿದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕದ ಪ್ರಾಂಶುಪಾಲರಾದ ಡಾ. ನಿಕೇತನರವರು, ಸರಕಾರದ ಈ ಕಾರ್ಯಕ್ರಮವು ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಪದವಿ ಶಿಕ್ಷಣದ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ನೆರವಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಪ್ರಾಂಶುಪಾಲರಾದ ಡಾ. ಅನಿನ್ ಕುಮಾರ್ ರವರು ಅಧ್ಯಕ್ಷೀಯ ನುಡಿಗಳನ್ನಾಡಿ, ಸರಕಾರದ ಈ ಯೋಜನೆಯು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಬೋಧನೆ ಮತ್ತು ಕಲಿಕೆ ಪ್ರಕ್ರಿಯೆಯನ್ನು ತಾಂತ್ರಿಕವಾಗಿ ಸಬಲಗೊಳಿಸಿ ವಿದ್ಯಾರ್ಥಿಗಳನ್ನು ಗುಣಮಟ್ಟದ ಶಿಕ್ಷಣದೆಡೆಗೆ ಕೊಂಡೊಯ್ಯಲಿದೆ ಎಂದು ಅಭಿಪ್ರಾಯಪಟ್ಟರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕದ ಐ.ಕ್ಯೂ.ಎ.ಸಿ ಸಂಚಾಲಕರಾದ ಪ್ರವೀಣ್‌ಶೆಟ್ಟಿ, ಐ.ಟಿಸಂಚಾಲಕರಾದ ಶರತ್‌ ಕುಮಾರ್‌ ಉಪಸ್ಥಿತರಿದ್ದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪುವಿನ ಐ.ಟಿ ಸಂಚಾಲಕರಾದ ಡಾ. ಲೋಕೇಶ್‌ನಾಥ್‌ ಬಿ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಹಾಯಕ ಪ್ರಾಧ್ಯಾಪಕರಾದ ರಾಕೇಶ್‌ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!