Saturday, October 3, 2026
Saturday, October 3, 2026

ಕಾರಂತೋತ್ಸವ ನಿರೂಪಿತ-2021 (ಎಣೆಯಿಲ್ಲದ ಚಕಿತ) ಶೀರ್ಷಿಕೆ ಅನಾವರಣ

ಕಾರಂತೋತ್ಸವ ನಿರೂಪಿತ-2021 (ಎಣೆಯಿಲ್ಲದ ಚಕಿತ) ಶೀರ್ಷಿಕೆ ಅನಾವರಣ

Date:

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ, ಡಾ. ಕಾರಂತ ಟ್ರಸ್ಟ್ (ರಿ.) ಉಡುಪಿ ಇವರ ಸಹಯೋಗದಲ್ಲಿ ನಡೆಯುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ 17ನೇ ವರ್ಷದ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಶೀರ್ಷಿಕೆ ನಿರೂಪಿತ-2021 (ಎಣೆಯಿಲ್ಲದ ಚಕಿತ) ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಅವರು ಅನಾವರಣಗೊಳಿಸಿದರು.

ಕಾರಂತ ಹುಟ್ಟೂರ ಪ್ರಶಸ್ತಿ 2021ನೆ ಸಾಲಿನಲ್ಲಿ 140ಕ್ಕೂ ಮಿಕ್ಕಿ ತೂಗು ಸೇತುವೆ ನಿರ್ಮಿಸಿ ಸಾಧನೆ ಮಾಡಿದ ಗಿರೀಶ್ ಭಾರಧ್ವಾಜ್ ಅವರಿಗೆ ಅಕ್ಟೋಬರ್ 10 ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕಿನಲ್ಲಿ ನೀಡಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು.

ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಮಾತನಾಡಿ, ಕಾರಂತೋತ್ಸವ ಅಕ್ಟೋಬರ್ 1 ರಿಂದ 10 ತನಕ ನಡೆಯಲಿದ್ದು ವೆಬಿನಾರ್, ಸಂಗೀತ ಲಹರಿ, ಕಾರಂತ ಚಿಂತನ, ಯಕ್ಷಗುಂಜನ, ಸಾಹಿತ್ಯಿಕ-ಸಾಂಸ್ಕೃತಿಕ ಕಾರ್ಯಕ್ರಮ ಆನ್‌ಲೈನ್ ನಲ್ಲಿ ನಡೆಯಲಿದ್ದು, ಕಾರಂತ ಥೀಮ್ ಪಾರ್ಕ್ ಫೇಸ್ ಬುಕ್ ಹಾಗೂ ಯುಟ್ಯೂಬ್ ಚಾನೆಲ್ ನಲ್ಲಿ ಪ್ರಸಾರಗೊಳ್ಳಲಿದೆ ಎಂದು ಹೇಳಿದರು.

ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪಿಡಿಓ ಶೈಲಾ ಎಸ್ ಪೂಜಾರಿ, ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು, ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!