Sunday, August 30, 2026
Sunday, August 30, 2026

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿ

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿ

Date:

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಎಎಚ್‌ಪಿಐ -ಅಸೋಸಿಯೇಷನ್ ​​ಆಫ್ ಹೆಲ್ತ್‌ ಕೇರ್ ಪ್ರೊವೈಡರ್ಸ್ (ಭಾರತ) ದಿಂದ ಆರೋಗ್ಯದ ಶ್ರೇಷ್ಠತೆಗಾಗಿ ಕೊಡಲ್ಪಡುವ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ, ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಶುಭ ಸೂರಿಯ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು.

ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿಗಳಾದ ಸಿ ಜಿ ಮುತ್ತಣ, ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಮತ್ತು ಗುಣಮಟ್ಟ ಅನುಷ್ಠಾನದ ಸಲಹೆಗಾರರಾದ ಡಾ. ಸುನೀಲ್ ಸಿ ಮುಂಡ್ಕೂರ್ ಉಪಸ್ಥಿತರಿದ್ದರು.

ಅಸೋಸಿಯೇಷನ್ ​​ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ (ಇಂಡಿಯಾ) ಎಎಚ್‌ಪಿಐ ಭಾರತದಲ್ಲಿ ಹೆಲ್ತ್‌ಕೇರ್ ಸಂಸ್ಥೆಗಳ ಪ್ರತಿನಿಧಿ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ ಮತ್ತು ಪ್ರತಿ ವರ್ಷ ಆರೋಗ್ಯ ಕ್ಷೇತ್ರದಲ್ಲಿ ಸಂಸ್ಥೆಗಳು ಸಾಧಿಸಿದ ಶ್ರೇಷ್ಠತೆಯನ್ನು ಗುರುತಿಸುತ್ತದೆ ಮತ್ತು ಪ್ರಶಸ್ತಿ ನೀಡಿ ಗೌರವಿಸುತ್ತದೆ.

ರೋಗಿಗಳ ಆರೈಕೆ, ರೋಗಿಯ ಶಿಕ್ಷಣ ಮತ್ತು ಅರಿವು, ಶುಶ್ರೂಷೆ, ಸಂಪನ್ಮೂಲ ನಿರ್ವಹಣೆ, ಶುಶ್ರೂಷಾ ಆರೈಕೆ ಗುಣಮಟ್ಟ, ಸಂವಹನ ಮತ್ತು ಮಾರ್ಗದರ್ಶನ ಮತ್ತು ಸೋಂಕು ನಿಯಂತ್ರಣ ಅಭ್ಯಾಸಗಳಂತಹ ಶುಶ್ರೂಷಾ ಆರೈಕೆಯ ಎಲ್ಲಾ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟವನ್ನು ಕಾಯ್ದುಕೊಳ್ಳುವ ಆಸ್ಪತ್ರೆಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!