Monday, October 5, 2026
Monday, October 5, 2026

ಕೆ.ಎಂ.ಸಿ: ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

ಕೆ.ಎಂ.ಸಿ: ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

Date:

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 30,000 ಮುಖಗವಸುಗಳನ್ನು (ಮಾಸ್ಕ) ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಯವರು ಉಡುಪಿ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್ ರವರಿಗೆ ಹಸ್ತಾಂತರಿಸಿದರು.

ಮಣಿಪಾಲ ಸಂಸ್ಥೆಯು 2020ರ ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಡಾ. ಟಿ ಎಂ ಎ ಪೈ ಆಸ್ಪತ್ರೆ ಉಡುಪಿಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಮೀಸಲಾಗಿಡಲಾಗಿತ್ತು. ಈಗ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ಮಾಸ್ಕಗಳನ್ನು ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯು ಪರೀಕ್ಷಾ ದಿನದಂದು ವಿದ್ಯಾರ್ಥಿಗಳಿಗೆ ವಿತರಿಸಲಿದೆ.

ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಇದರ ವಿತರಣೆಯ ಜವಾಬ್ದಾರಿ ವಹಿಸಿಕೊಳ್ಳಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್ ಎಚ್ ನಾಗೂರ, ಉಡುಪಿ ಜಿಲ್ಲೆ, ಸ್ಕೌಟ್ಸ್ ಆಂಡ್ ಗೈಡ್ಸ್ ಇದರ ಜಿಲ್ಲಾ ಆಯುಕ್ತರಾದ ಡಾ. ವಿಜಯೇಂದ್ರ ರಾವ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!