Saturday, August 29, 2026
Saturday, August 29, 2026

ಕೆ.ಎಂ.ಸಿ ಮಣಿಪಾಲ: ಜೂನ್ 21 ರಿಂದ ಎಲ್ಲಾ ಸೇವೆಗಳು ಸಾರ್ವಜನಿಕರಿಗೆ ಲಭ್ಯ

ಕೆ.ಎಂ.ಸಿ ಮಣಿಪಾಲ: ಜೂನ್ 21 ರಿಂದ ಎಲ್ಲಾ ಸೇವೆಗಳು ಸಾರ್ವಜನಿಕರಿಗೆ ಲಭ್ಯ

Date:

ಜೂನ್ 21 ರಿಂದ ಜಾರಿಗೆ ಬರುವಂತೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಲ್ಲಾ ಹೊರರೋಗಿ ವಿಭಾಗಗಳು, ಒಳರೋಗಿ ಸೇವೆಗಳು, ನಾನ್ – ಓ ಪಿ ಡಿ  ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲಾ ವಿಭಾಗಗಳು ಸಾರ್ವಜನಿಕರಿಗೆ  ಸೇವೆಗೆ ಮುಕ್ತವಾಗಲಿದೆ.  ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳೆಗ್ಗೆ 8.00 ರಿಂದ ಸಂಜೆ 5.00 ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲಾ ರೀತಿಯ ಶಸ್ತ್ರ ಚಿಕಿತ್ಸಾ ಸೌಲಭ್ಯ ಕೂಡ ದೊರೆಯಲಿದೆ. ಆದರೆ ಶಸ್ತ್ರ ಚಿಕಿತ್ಸೆಗೆ ಒಳ ರೋಗಿಯಾಗಿ ಸೇರ್ಪಡೆಯಾಗಲು ಕೋವಿಡ್-19 ಪರೀಕ್ಷೆ (RTPCR) ಕಡ್ಡಾಯವಾಗಿದೆ. ಒಂದು ವೇಳೆ ತಮ್ಮ ಊರಿನಲ್ಲಿಯೇ ಮಾಡಿಸಿದ್ದರೆ ಗಂಟಲ ದ್ರವ ತೆಗೆದ 72 ಗಂಟೆಗಳ ವರೆಗೆ ಮಾತ್ರ ಊರ್ಜಿತವಾಗಿರುತ್ತದೆ. ಇಲ್ಲವಾದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ  ಸೇರ್ಪಡೆಗೊಳಿಸುವ ಮೊದಲು ಕಡ್ಡಾಯವಾಗಿ ಕೋವಿಡ್  -19 ಪರೀಕ್ಷೆ  ಮಾಡಲಾಗುವುದು.

ಈ ಸೇವೆಯನ್ನು ಪಡೆದುಕೊಳ್ಳಲು ಬರುವ ಪ್ರತಿಯೊಂದು ರೋಗಿಯು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು, ನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಿ ಕೊಡಲಾಗುವುದು. ಎಲ್ಲಾ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು ಮತ್ತು ಪ್ರತಿ ರೋಗಿಗಳೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ವೈದ್ಯಕೀಯ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!