Monday, August 31, 2026
Monday, August 31, 2026

ಎ.ಜಿ.ಕೊಡ್ಗಿಯವರಿಗೆ ಕೋ. ಮ. ಕಾರಂತ ಪ್ರಶಸ್ತಿ

ಎ.ಜಿ.ಕೊಡ್ಗಿಯವರಿಗೆ ಕೋ. ಮ. ಕಾರಂತ ಪ್ರಶಸ್ತಿ

Date:

ಕುಂದಾಪುರ: ಕುಂದಪ್ರಭ ಸಂಸ್ಥೆಯ ವತಿಯಿಂದ ಪ್ರದಾನ ಮಾಡಲಾಗುತ್ತಿರುವ ಕೋ. ಮ. ಕಾರಂತ ಪ್ರಶಸ್ತಿಗೆ ಹಿರಿಯ ಸಾಮಾಜಿಕ ಧುರೀಣ, ಮಾಜಿ ಶಾಸಕ, ಕರ್ನಾಟಕ 3ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ, ಅಮಾಸೆಬೈಲು ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷ ಎ. ಗೋಪಾಲಕೃಷ್ಣ ಕೊಡ್ಗಿಯವರನ್ನು ಆಯ್ಕೆ ಮಾಡಲಾಗಿದೆ.

ಸ್ವಾತಂತ್ರ್ಯದ ಅಮ್ರತಮಹೋತ್ಸವದ ವರ್ಷದಲ್ಲಿ, ಸ್ವಾತಂತ್ರ್ಯ ಹೋರಾಟಗಾರ ಕ್ರಷ್ಣರಾಯ ಕೊಡ್ಗಿಯವರ ಪುತ್ರರೂ ಆಗಿರುವ ಎ. ಜಿ. ಕೊಡ್ಗಿಯವರನ್ನು, ಕೋಣಿ ಶಿವಾನಂದ ಕಾರಂತ ನೇತೃತ್ವದ ಸಮಿತಿ ಆಯ್ಕೆ ಮಾಡಿದೆ.

ಖ್ಯಾತ ಪತ್ರಕರ್ತ, ಸಾಹಿತಿ, ಬ್ಯಾಂಕರ್, ವಾಗ್ಮಿ ಕುಂದಾಪುರದ ಕೋಣಿ ಮಹಾಬಲೇಶ್ವರ ಕಾರಂತರ ಹೆಸರಲ್ಲಿ ಪ್ರತೀ ವರ್ಷ ಸಾಧಕರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕಳೆದ ಆರು ದಶಕದಲ್ಲಿ ಎ.ಜಿ.ಕೊಡ್ಗಿಯವರು ಹಲವು ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆಗಳನ್ನು ಮಾಡಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 23ರಂದು ಆದಿತ್ಯವಾರ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ರೋಟರಿ ಲಕ್ಷ್ಮಿನರಸಿಂಹ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು.ಎಸ್.ಶೆಣೈ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!