Sunday, January 19, 2025
Sunday, January 19, 2025

ಜು. 26 ರಿಂದ ಕೃಷಿ ಅಭಿಯಾನ ಕಾರ್ಯಕ್ರಮ: ಜಿಲ್ಲಾಧಿಕಾರಿ

ಜು. 26 ರಿಂದ ಕೃಷಿ ಅಭಿಯಾನ ಕಾರ್ಯಕ್ರಮ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲೆಯಾದ್ಯಂತ ಜುಲೈ 26 ರಿಂದ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿ, ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ 2021-22 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಗ್ರ ಕೃಷಿ ಅಭಿಯಾನವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಜುಲೈ 26 ರಿಂದ ಆಗಸ್ಟ್ 7 ರವರೆಗೆ ಏರ್ಪಡಿಸಿ, ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳ ತಂಡ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ , ಸಮಗ್ರ ಕೃಷಿ ಅಭಿವೃಧ್ದಿ ಕುರಿತು ರೈತರಿಗೆ ವಿವರವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೃಷಿಕರನ್ನು ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಲು ಪ್ರಸುತ್ತ ಸಾಲಿನಲ್ಲಿ, ಕೇಂದ್ರ ಸರಕಾರವು ಕೃಷಿ ಯೋಜನೆಗಳಿಗೆ ಹೆಚ್ಚು ಮಹತ್ವ ನೀಡಿದ್ದು, ರೈತರು ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಬಾಂಕ್ ಗೆ ಭೇಟಿ ನೀಡಿದಾಗ, ಬ್ಯಾಂಕ್ ನಲ್ಲಿರುವ ಕೃಷಿ ಯೋಜನೆಗಳ ಬಗ್ಗೆ ಬ್ಯಾಂಕ್ ನ ಮ್ಯಾನೇಜರ್‌ಗಳು, ರೈತರಿಗೆ ಸಮರ್ಪಕವಾದ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

2020–21 ನೆ ಸಾಲಿನಲ್ಲಿ ಬೆಳೆ ವಿಮಾ ಯೋಜನೆಯಡಿಯಲ್ಲಿ ಈ ವರೆಗೆ 3085 ರೈತರಿಗೆ ಕೃಷಿ ಚಟುವಟಿಕೆಗಾಗಿ ವಿಮೆ ಹಾಗೂ ಸಾಲ ಸೌಲಭ್ಯ ಒದಗಿಸಿದ್ದು, ಬೆಳೆ ವಿಮಾ ಯೋಜನೆಯಲ್ಲಿ ಬಾಕಿ ಉಳಿದ ಪ್ರಕರಣಗಳನ್ನು ಒಂದು ತಿಂಗಳ ಒಳಗೆ ವಿಮೆ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದರು.

ಕೃಷಿ ಮೂಲಭೂತ ಸೌಕರ್ಯ ನಿಧಿಯಲ್ಲಿ ಸುಧಾರಿತ ಮಾರುಕಟ್ಟೆ ಸೌಕರ್ಯವನ್ನು ಸೃಷ್ಟಿಸಿ ರೈತರಿಗೆ ನೇರ ಮಾರಾಟ ಮಾಡಲು ಅವಕಾಶ ಕಲ್ಪಿಸಬೇಕು ಹಾಗೂ ಫಲಾನುಭವಿಯ ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲದ ಮೇಲಿನ ಬಡ್ಡಿಗೆ ನಿಗಧಿತ ಸಹಾಯಧನವನ್ನು ನೀಡಬೇಕು ಈ ಯೋಜನೆಯ ಕುರಿತು ಪ್ರಚಾರ ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ಆಯೋಜಿಸಬೇಕು, ಸಮಗ್ರ ಕೃಷಿ ಮಾಹಿತಿ ಯೋಜನೆಯಡಿಯಲ್ಲಿ ರೈತರಿಗೆ ಸಕಾಲದಲ್ಲಿ ಕೃಷಿ ಪರಿಕರಗಳ ಸೌಲಭ್ಯವನ್ನು ಒದಗಿಸುವುದರ ಜೊತೆಗೆ ಅಗತ್ಯ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಲಕ್ಷ್ಮಣ್, ಡಾ.ಧನಂಜಯ, ಡಿ.ಎಚ್.ಓ ಡಾ.ನಾಗಭೂಷಣ್ ಉಡುಪ ಹಾಗೂ ಕೃಷಿ ಇಲಾಖೆಯ ವಿವಿಧ ಅಧಿಕಾರಿಗಳು, ರೈತ ಪ್ರತಿನಿಧಿಗಳು, ಸಮಿತಿ ಸಂಘ ಸಂಸ್ಥೆಯ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!