Sunday, January 19, 2025
Sunday, January 19, 2025

ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ

ಮಂಗಳೂರು-ಪೂನಾ, ಉಡುಪಿ-ಹೈದ್ರಾಬಾದ್ ಮಾರ್ಗದ ಸಾರಿಗೆ ಕಾರ್ಯಾಚರಣೆ

Date:

ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಪೂನಾ ಮಾರ್ಗದಲ್ಲಿ ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 28 ರಿಂದ ಪುನಃ ಸಂಚಾರವನ್ನು ಪ್ರಾರಂಭಿಸಲಾಗುವುದು.

ಸಾರಿಗೆ ಕಾರ್ಯಾಚರಣೆಯ ವಿವರ: ಅಂಬಾರಿ ಡ್ರೀಮ್‌ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಬೆಳಗಾವಿ, ಕರಾಡ, ಸತಾರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಪೂನಾ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 6.30 ಕ್ಕೆ ಪೂನಾದಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿದೆ.

ಉಡುಪಿಯಿಂದ ಹೈದ್ರಾಬಾದ್‌ಗೆ ಈಗಾಗಲೇ ರಾಜಹಂಸ ಸಾರಿಗೆಗಳನ್ನು ಪ್ರಾರಂಭಿಸಲಾಗಿದ್ದು, ಉಡುಪಿಯಿಂದ ಬೆಳಗ್ಗೆ 11.30 ಕ್ಕೆ ಹೊರಟು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹೊಸಪೇಟೆ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 6 ಗಂಟೆಗೆ ಹೈದ್ರಾಬಾದ್ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5.45 ಕ್ಕೆ ಹೈದ್ರಾಬಾದ್‌ನಿಂದ ಹೊರಟು ಮರುದಿನ ಬೆಳಗ್ಗೆ 11 ಗಂಟೆಗೆ ಉಡುಪಿ ತಲುಪಲಿದೆ.

ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ http://www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!