Tuesday, September 29, 2026
Tuesday, September 29, 2026

ಜೂ. 25 ರಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮಂತ್ರಾಲಯ ಮಾರ್ಗದ ಸಾರಿಗೆ ಕಾರ್ಯಾಚರಣೆ

ಜೂ. 25 ರಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮಂತ್ರಾಲಯ ಮಾರ್ಗದ ಸಾರಿಗೆ ಕಾರ್ಯಾಚರಣೆ

Date:

ಪ್ರಸ್ತುತ ಕೋವಿಡ್ ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮಂತ್ರಾಲಯ ಮಾರ್ಗದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 25 ರಿಂದ ಪುನಃ ಸಾರಿಗೆಗಳ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

ಸಾರಿಗೆ ಕಾರ್ಯಾಚರಣೆಯ ವಿವರ:
ಅಂಬಾರಿ ಡ್ರೀಮ್ ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಹುಬ್ಬಳ್ಳಿ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 9 ಗಂಟೆಗೆ ಹೈದ್ರಾಬಾದ್ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 5 ಗಂಟೆಗೆ ಹೈದ್ರಾಬಾದ್‌ನಿಂದ ಹೊರಟು ಮೆಹಬೂಬನಗರ, ರಾಯಚೂರು, ಹುಬ್ಬಳ್ಳಿ, ಕುಮಟ, ಕುಂದಾಪುರ, ಮಣಿಪಾಲ, ಉಡುಪಿ ಮಾರ್ಗವಾಗಿ ಬೆಳಗ್ಗೆ 10 ಗಂಟೆಗೆ ಮಂಗಳೂರು ತಲುಪಲಿದೆ.

ನಾನ್ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ಮ 3.30 ಕ್ಕೆ ಮಂಗಳೂರಿನಿಂದ ಹೊರಟು ಉಡುಪಿ, ಕುಂದಾಪುರ, ಸಿದ್ಧಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ ಮಾರ್ಗವಾಗಿ ಬೆಳಗ್ಗೆ 6.30 ಕ್ಕೆ ಮಂತ್ರಾಲಯ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5 ಗಂಟೆಗೆ ಮಂತ್ರಾಲಯದಿಂದ ಹೊರಟು ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತೀರ್ಥಹಳ್ಳಿ, ಸಿದ್ಧಾಪುರ, ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 7.30 ಕ್ಕೆ ಮಂಗಳೂರು ತಲುಪಲಿದೆ.
ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ http://www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನ ಭದ್ರ ಬುನಾದಿ: ಡಾ.ಶ್ರೀಪಾದ್ ಭಟ್

ಉಡುಪಿ, ಸೆ.29: ಅಂಬೇಡ್ಕರ್ ರವರು ಶಿಕ್ಷಣಕ್ಕೆ ಅತ್ಯಂತ ಮಹತ್ವವನ್ನು ನೀಡಿದವರು. ಶಿಕ್ಷಣ...

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

ಮಣಿಪಾಲ, ಸೆ.29: ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್. ಎಸ್...

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...
error: Content is protected !!