Tuesday, January 21, 2025
Tuesday, January 21, 2025

ಉಡುಪಿ: ಏಕಕಾಲದಲ್ಲಿ ಮೊಳಗಿದ ಕನ್ನಡ ಗಾಯನ

ಉಡುಪಿ: ಏಕಕಾಲದಲ್ಲಿ ಮೊಳಗಿದ ಕನ್ನಡ ಗಾಯನ

Date:

ಉಡುಪಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠ ಗಾಯನ ಕಾರ್ಯಕ್ರಮದಡಿ ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಸೇರಿದಂತೆ, ಕನ್ನಡದ ಶ್ರೇಷ್ಠತೆಯನ್ನು ಸಾರುವ, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣ ಸೇರಿದಂತೆ ಜಿಲ್ಲೆಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಾಡುವ ಮೂಲಕ ಜಿಲ್ಲೆಯಾದ್ಯಂತ ಕನ್ನಡದ ಕಂಪನ್ನು ಹರಡಲಾಯಿತು.

ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣದಲ್ಲಿ ಸುಮಾರು 750 ಕ್ಕೂ ಅಧಿಕ ಮಂದಿಯಿಂದ ಕನ್ನಡ ಗೀತೆಗಳ ಗಾಯನ ನಡೆಯಿತು.

ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಣಿಪಾಲ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕಾಗಿ ಬಹುತೇಕ ಪುರುಷ ಸಿಬ್ಬಂದಿಗಳು ಬಿಳಿ ಬಣ್ಣದ ಶರ್ಟ್ ಗಳು ಮತ್ತು ಮಹಿಳಾ ಸಿಬ್ಬಂದಿಗಳು ಹಳದಿ ಬಣ್ಣದ ಉಡುಪುಗಳನ್ನು ಧರಿಸಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಕನ್ನಡವನ್ನು ಎಲ್ಲಾ ಸ್ಥಳದಲ್ಲಿ, ಎಲ್ಲಾ ಕಾರ್ಯದಲ್ಲೂ ಬಳಸುವುದಾಗಿ ಸಂಕಲ್ಪ ಕೈಗೊಳ್ಳಲಾಯಿತು.

ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್ ಸೇರಿದಂತೆ ಜಿಲ್ಲೆಯ 20 ಕ್ಕೂ ಅಧಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಏಕಕಾಲದಲ್ಲಿ ಈ ಗಾಯನ ಕಾರ್ಯಕ್ರಮ ನಡೆದಿದ್ದು, ಜಿಲ್ಲೆಯಾದ್ಯಂತ ಸುಮಾರು 60 ರಿಂದ 63 ಸಾವಿರ ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಎಲ್ಲರಿಗೂ ಕಾರ್ಯಕ್ರಮ ಅತ್ಯಂತ ಸಂತೋಷ ತಂದಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು.

ಮಲ್ಪೆ ಕಡಲಿನಲ್ಲಿಯೂ ಮೊಳಗಿದ ಕನ್ನಡ ಗೀತೆಗಳ ಕಹಳೆ: ಮಲ್ಪ ಕಡಲ ಮಧ್ಯದಲ್ಲಿ ಬೋಟ್ ನಲ್ಲಿ 100 ಮಂದಿ ವೃತ್ತಿಪರ ಸಂಗೀತ ಕಲಾವಿದರಿಂದ ನಡೆದ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಅತ್ಯಂತ ವಿಶೇಷವಾಗಿತ್ತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಲ್ಪೆ ಅಭಿವೃಧ್ದಿ ಸಮಿತಿ, ದಕ ಮತ್ತು ಉಡುಪಿ ಮೀನುಗಾರಿಕಾ ಫೆಡರೇಷನ್ ಸಹಯೋಗದಲ್ಲಿ ಸಮುದ್ರದಲ್ಲಿ ನಡೆದ ಕಾಯಕ್ರಮದಲ್ಲಿ 100 ಮಂದಿ ಕಲಾವಿದರು ತಮ್ಮ ಗಾಯನದ ಮೂಲಕ ಕಡಲಿನ ಅಲೆಗಳ ನಡುವೆ ಕನ್ನಡದ ಕಹಳೆಯನ್ನು ಮೊಳಗಿಸಿದರು.

ಇವರೊಂದಿಗೆ ಮಲ್ಪೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ದನಿಗೂಡಿಸಿದ್ದು, ಒಟ್ಟು 200 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ದಕ ಮತ್ತು ಉಡುಪಿ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಮತ್ತಿತರರು ಉಪಸ್ಥಿತರಿದ್ದರು.

ಶ್ರೀಕೃಷ್ಣ ಮಠದಲ್ಲಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಪರ್ಯಾಯ ಶ್ರೀಅದಮಾರು ಶ್ರೀಕೃಷ್ಣ ಮಠ ಉಡುಪಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಶ್ರೀ ಕೃಷ್ಣ ಮಠದ ಸಿಬ್ಬಂದಿ, ಸಾರ್ವಜನಿಕರು ಮತ್ತು ಪ್ರವಾಸಿಗರು ಸೇರಿದಂತೆ ಸುಮಾರು 800 ಕ್ಕೂ ಅಧಿಕ ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಪೂರ್ಣಿಮಾ ಸುರೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು, ಕೈಗಾರಿಕೆಗಳು, ಪ್ರವಾಸಿ ಕೇಂದ್ರಗಳು, ಪ್ರಮುಖ ದೇವಾಲಯಗಳು, ಬ್ಯಾಂಕ್‌ಗಳು, ಬಸ್ ನಿಲ್ದಾಣ, ರಿಕ್ಷಾ ನಿಲ್ದಾಣ, ಮೆಸ್ಕಾಂ ಸೇರಿದಂತೆ ಎಲ್ಲಡೆ ಏಕಕಾಲದಲ್ಲಿ ಕನ್ನಡದ ಕಂಪು ಪಸರಿಸಿದ್ದು, ಒಟ್ಟು 62000 ಕ್ಕೂ ಅಧಿಕ ಮಂದಿ ಅತ್ಯುತ್ಸಾಹದಿಂದ ಕನ್ನಡದ ಬಗೆಗಿನ ತಮ್ಮ ಒಲುಮೆಯನ್ನು ಕನ್ನಡದ ಶ್ರೇಷ್ಠತೆ ಸಾರುವ ಗೀತೆಗಳ ಗಾಯನದ ಮೂಲಕ ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!