Sunday, September 22, 2024
Sunday, September 22, 2024

ಕೋಟೇಶ್ವರ: ಸರ್ಕಾರಿ ಕಾಲೇಜಿಗೆ ಎಲ್‌ಸಿಡಿ ಪ್ರೊಜೆಕ್ಟರ್ ಹಸ್ತಾಂತರ

ಕೋಟೇಶ್ವರ: ಸರ್ಕಾರಿ ಕಾಲೇಜಿಗೆ ಎಲ್‌ಸಿಡಿ ಪ್ರೊಜೆಕ್ಟರ್ ಹಸ್ತಾಂತರ

Date:

ಕುಂದಾಪುರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಸಮರ್ಪಕ ಬಳಕೆ ಎಂಬುದು ಈ ದಿನದ ತುರ್ತು ಅವಶ್ಯಕತೆಗಳಲ್ಲಿ ಒಂದಾಗಿದೆ.

ಪ್ರತಿಯೊಬ್ಬ ಶಿಕ್ಷಕ ಇದನ್ನು ಮನಗಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಈ ತಂತ್ರಜ್ಞಾನಗಳ ಅಧ್ಯಯನ ನಡೆಸಿ ಬದಲಾವಣೆಯ ಪರ್ವದಲ್ಲಿ ವಿದ್ಯಾರ್ಥಿಗಳಿಗೋಸ್ಕರ ನಮ್ಮಿಂದಾದ ಕೊಡುಗೆಗಳನ್ನು ನೀಡಬೇಕೆಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ್ ಹೇಳಿದರು.

ಅವರು ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಸಂಸ್ಥೆಗೆ ಕಂಪ್ಯೂಸಾಪ್ಟ್ ಕೋಟೇಶ್ವರ ಇವರು ವಿದ್ಯಾರ್ಥಿಗಳ ಕಲಿಕೆಗಾಗಿ ದೇಣಿಗೆಯಾಗಿ ನೀಡಿದ ಎಲ್‌ಸಿಡಿ ಪ್ರೊಜೆಕ್ಟರನ್ನು ಸ್ವೀಕರಿಸಿ ಕರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಂಪ್ಯೂಸಾಪ್ಟ್ ಕೋಟೇಶ್ವರ ಸಂಸ್ಥೆಯ ಶಿಕ್ಷಕಿಯರಾದ ಶೋಭಾ ಮತ್ತು ಆಶಾ ಇವರು ತಮ್ಮ ಸಂಸ್ಥೆಯ ಪರವಾಗಿ ಪ್ರೊಜೆಕ್ಟರನ್ನು ಕಾಲೇಜಿಗೆ ಹಸ್ತಾಂತರಿಸಿದರು.

ಪತ್ರಕರ್ತ ಸೋಮಶೇಖರ ಪಡುಕೆರೆ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಉಷಾದೇವಿ ಜೆ.ಎಸ್, ಐಕ್ಯೂಎಸಿ ಸಂಚಾಲಕ ನಾಗರಾಜ ಯು ಉಪಸ್ಥಿತರಿದ್ಧರು.

ಸಹಾಯಕ ಪ್ರಾಧ್ಯಾಪಕ ಸಂತೋಷ ನಾಯ್ಕ ಹೆಚ್ ಕಾರ್ಯಕ್ರಮ ನಿರ್ವಹಿಸಿದರು. ಗ್ರಂಥಪಾಲಕ ರವಿಚಂದ್ರ ಹೆಚ್.ಎಸ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!