ಉಡುಪಿ, ಅ.6: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯಗಳ ಜನರ ಅಭಿವೃದ್ಧಿಗಾಗಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ನಾಗರಿಕ ಸೇವಾಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvldcl.karnataka.gov.in ಅಥವಾ ನಿಗಮದ ದೂ. ಸಂಖ್ಯೆ: 080-22865522, ಮೊ.ನಂ: 9900012351 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರವರ್ಗ -1 ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹೊಸತು ಹಾಗೂ ನವೀಕರಣ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಾಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 2 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ambigaradevelopment.karnataka.gov.in ಅಥವಾ ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ/ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಮಗದ ಸಹಾಯವಾಣಿ ಸಂಖ್ಯೆ: 080-22864099 ಹಾಗೂ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.