Saturday, September 21, 2024
Saturday, September 21, 2024

ಫೆ. 11- ರಾಷ್ಟ್ರೀಯ ಲೋಕ್ ಅದಾಲತ್

ಫೆ. 11- ರಾಷ್ಟ್ರೀಯ ಲೋಕ್ ಅದಾಲತ್

Date:

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ 2023 ರ ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ್ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಈ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ವಿಚ್ಛೇದನ ಹೊರತುಪಡಿಸಿ ವೈವಾಹಿಕ ಮತ್ತು ಕುಟುಂಬ ನ್ಯಾಯಾಲಯದ ಪ್ರಕರಣ, ಜಿಲ್ಲಾ ಗ್ರಾಹಕ ಪರಿಹಾರ ಆಯೋಗದಲ್ಲಿನ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಮೋಟಾರು ವಾಹನ ಪ್ರಕರಣ, ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.

ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥ್ಯಪಡಿಸಿಕೊಳ್ಳಬಹುದಾಗಿದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಟೋಲ್ ಫ್ರೀ ಸಂಖ್ಯೆ: 1800-425-90900 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!