Saturday, October 24, 2026
Saturday, October 24, 2026

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 5ನೇ ಬಾರಿಗೆ ಸಾಧನಾ ಪ್ರಶಸ್ತಿ

Date:

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2020-21ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 5 ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಬ್ಯಾಂಕಿಂಗ್ ಸಲಹೆಗಾರರಾದ ಆನಂದ ಎನ್. ಪುತ್ರನ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಜಿ. ಕೆ. ಶೀನಾ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಯಶ್‌ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, ಕಳೆದ 12 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ 18% ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ, ಕೋವಿಡ್ ಸಂದಿಗ್ಧ ಸಂದರ್ಭದಲ್ಲಿಯೂ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಪೆರ್ಡೂರು, ಅ.23: ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ...

ದಾರ್ಶನಿಕರ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶ, ಜೀವನ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ಅ.23: ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಧಾರ್ಮಿಕ ಬೆಳವಣಿಗೆಗೆ ಶ್ರಮಿಸಿದ...

ಅ.24: ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ, ಅ.23: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ...
error: Content is protected !!