Saturday, September 21, 2024
Saturday, September 21, 2024

ಮಹರ್ಷಿ ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಮಹರ್ಷಿ ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Date:

ಉಡುಪಿ: ಬೇಡನಾಗಿದ್ದ ವ್ಯಕ್ತಿ ತನ್ನ ಸತತ ಪರಿಶ್ರಮ ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡಿದ್ದು, ವಾಲ್ಮೀಕಿ ಅವರ ಈ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಅವರು ಇಂದು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ರಚನೆಯ ರಾಮಾಯಣವು ಎಲ್ಲರಿಗೂ ಅರ್ಥವಾಗುವ ಸರಳ ಭಾಷೆಯಿಂದ ಕೂಡಿದ್ದು, ವಿವಿಧ ಭಾಷೆಗಳಿಗೆ ಭಾಷಾಂತರವಾಗಿ, ಧಾರಾವಾಹಿ, ಚಲನಚಿತ್ರಗಳ ಮೂಲಕ ಪ್ರತಿಯೊಬ್ಬರ ಮನೆ ಮನಗಳನ್ನು ಮುಟ್ಟಿದೆ. ರಾಮಾಯಣದಲ್ಲಿನ ಮೌಲ್ಯಗಳು, ತತ್ವಗಳು ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ.

ಸತತ ಪರಿಶ್ರಮದಿಂದ ಯಾವುದೇ ವ್ಯಕ್ತಿ ಮಹಾನ್ ಸಾಧನೆ ಮಾಡಬಹುದು ಎನ್ನುವುದಕ್ಕೆ ವಾಲ್ಮೀಕಿ ಸಾಕ್ಷಿಯಾಗಿದ್ದಾರೆ. ಉಡುಪಿ ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಕಾರ್ಯಕ್ರಮ ಆರಂಭವಾಗುತ್ತಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪರಿಶಿಷ್ಟ ಪಂಗಡದ ಅಭಿವೃಧ್ದಿಗೆ ಸರ್ಕಾರ ರೂಪಿಸಿರುವ ಯೋಜನೆಗಳ ಪ್ರಯೋಜನವನ್ನು ಪ.ಪಂಗಡದ ಜನತೆ ಪಡೆಯಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಅತ್ಯಂತ ಹಿಂದುಳಿದ ವರ್ಗದ ವ್ಯಕ್ತಿ ಜ್ಞಾನ ಪಡೆಯುವ ಮೂಲಕ ಆದಿಕವಿ ವಾಲ್ಮೀಕಿಯಾಗಿದ್ದಾರೆ. ಹಿಂದುಳಿದ ವರ್ಗದ ಜನತೆ ತಮ್ಮಲ್ಲಿನ ಕೀಳಿರಿಮೆ ತೊರೆದು, ವಿದ್ಯಾಭ್ಯಾಸ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಪ್ರಮುಖವಾದುದು ಎಂದರು.

ಮಹರ್ಷಿ ವಾಲ್ಮೀಕಿಯವರ ವ್ಯಕ್ತಿತ್ವ ಮತ್ತು ಜೀವನದ ಬಗ್ಗೆ ಉಪನ್ಯಾಸ ನೀಡಿದ ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿ ದಿನಕರ ಕೆಂಜೂರು ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಚಿಂತಕ, ತತ್ವಜ್ಞಾನಿ, ಶಿಕ್ಷಣ ಪ್ರೇಮಿಯಾಗಿದ್ದರು, ರಾಮಾಯಣವನ್ನು ಜನಸಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ರಚಿಸಿದ್ದಾರೆ.

ಅದರಲ್ಲಿನ ಪ್ರಕೃತಿ ಸೌಂದರ್ಯ, ಆದರ್ಶ ವ್ಯಕ್ತಿಯ ಚಿತ್ರಣ, ಕೌಟುಂಬಿಕ ಮೌಲ್ಯಗಳು, ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳು ಎಲ್ಲಾ ಕಾಲದಲ್ಲೂ ಪ್ರಸ್ತುತವಾಗಿವೆ. ವ್ಯಕ್ತಿ ತನ್ನಲ್ಲಿನ ನಕಾರಾತ್ಮಕ ಭಾವನೆಗಳನ್ನು ತೊಡೆದು, ಆತ್ಮವಿಶ್ವಾಸದಿಂದ ಮುನ್ನಡೆದರೆ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂಬುದಕ್ಕೆ ವಾಲ್ಮೀಕಿ ಅವರ ಜೀವನ ಚರಿತ್ರೆ ಸಾಕ್ಷಿಯಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಸಮಗ್ರ ಗಿರಿಜನ ಅಭಿವೃದ್ದಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್ ಸ್ವಾಗತಿಸಿ, ವಿಶ್ವನಾಥ್ ವಂದಿಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಾದ ಪ್ರತಿಭಾ ನಾಯ್ಕ್, ಕಾವ್ಯಶ್ರೀ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶೀನ ನಾಯ್ಕ, ದೋಗು ಕೊರಗ, ಗುಲಾಬಿ ಗೌಡ್ತಿ ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!