Friday, July 24, 2026
Friday, July 24, 2026

ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್: ಆಟೋ ಚಾಲಕರಿಗೆ ಕಿಟ್ ವಿತರಣೆ

ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್: ಆಟೋ ಚಾಲಕರಿಗೆ ಕಿಟ್ ವಿತರಣೆ

Date:

ಯಶೋದ ಆಟೋ ಯೂನಿಯನ್ (ರಿ.) ಇದರ ಸದಸ್ಯರು 50 ದಿನಗಳಿಂದ ಕೋವಿಡ್ ಸಂಬಂಧಿತ ಸೇವೆಗಳಿಗೆ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ಉಚಿತ ಸೇವೆಯನ್ನು ನೀಡುತ್ತಾ ಬಂದಿದ್ದು ಗೌರವ ಪೂರ್ವಕವಾಗಿ ಇವರಿಗೆ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ವತಿಯಿಂದ ನೀಡಲಾದ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ, ಕೋವಿಡ್ ಸಂಕಷ್ಟ ಸಮಯದಲ್ಲಿ ತಾವು ಕಷ್ಟದಲ್ಲಿದ್ದರೂ ಉಚಿತ ಸೇವೆ ನೀಡಿ ಸಾಮಾಜಿಕ ಜವಾಬ್ದಾರಿ ನಿರ್ವಹಿಸಿದ ಯಶೋದ ಆಟೋ ಯೂನಿಯನ್ (ರಿ.) ಇದರ ಸದಸ್ಯ ಕಾರ್ಯ ಶ್ಲಾಘನೀಯ ಎಂದರು. ಸಂಕಷ್ಟದಲ್ಲಿರುವವರಿಗೆ ಫುಡ್ ಕಿಟ್ ಪ್ರಾಯೋಜಿಸಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಅಮೃತ ಕೃಷ್ಣಮೂರ್ತಿ ಆಚಾರ್ಯ, ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ನ ರಾಘವೇಂದ್ರ ನಾಯಕ್ ಅಜೆಕಾರ್, ತಂಝೀಮ್ ಶಿರ್ವ, ಸುಧೀರ್ ನಾಯಕ್, ಸಂಸ್ಥೆಯ ಇತರ ಸದಸ್ಯರು, ಯಶೋದ ಆಟೋ ಯೂನಿಯನ್ (ರಿ.) ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!