Friday, September 20, 2024
Friday, September 20, 2024

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ: ಗಣಿತ ದಿವಸ ಆಚರಣೆ

ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ: ಗಣಿತ ದಿವಸ ಆಚರಣೆ

Date:

ಮಿಜಾರು (ಮೂಡುಬಿದಿರೆ): ಗಣಿತ ಕಬ್ಬಿಣದ ಕಡಲೆಯಲ್ಲ. ಅದು ಸರಳ ವಿಜ್ಞಾನ ಎಂದು ಉಜಿರೆ ಎಸ್‌ಡಿಎಂ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥ ಪ್ರೊ. ಟಿ. ಪ್ರಕಾಶ್ ಪ್ರಭು ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಗಣಿತ ವಿಜ್ಞಾನ ವಿಭಾಗ ಹಮ್ಮಿಕೊಂಡ ಗಣಿತ ದಿವಸದಲ್ಲಿ ಅವರು ಮಾತನಾಡಿದರು.

ಗಣಿತವನ್ನು ಆಸಕ್ತಿದಾಯಕವಾಗಿ ಮಾಡಬಹುದು. ಬಹುತೇಕರಿಗೆ ಕಷ್ಟಕರವಾದ ಗಣಿತವನ್ನು ಮೋಜಿನ ಮೂಲಕ ಸುಲಲಿತವಾಗಿ ಕಲಿಯಬಹುದು. ಗಣಿತ ಪಿತಾಮಹ ಶ್ರೀನಿವಾಸ ರಾಮಾನುಜನ್ ಅವರಿಂದ ಕಲಿಯಲು ಸಾಕಷ್ಟು ವಿಚಾರಗಳಿವೆ ಎಂದರು.

ಪ್ರಾಂಶುಪಾಲ ಡಾ. ಪೀಟರ್ ಫರ್ನಾಂಡಿಸ್ ಮಾತನಾಡಿ, ಎಂಜಿನಿಯರಿಂಗ್ ಅಧ್ಯಯನದಲ್ಲಿ ಗಣಿತ ಬಹುಮುಖ್ಯ ವಿಚಾರ. ಆದರೆ, ಬಹುತೇಕ ವಿದ್ಯಾರ್ಥಿಗಳು ಗಣಿತ ಅಧ್ಯಯನದಿಂದ ಬಹುದೂರ ಸರಿಯುತ್ತಾರೆ. ಇಂದಿನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳನ್ನು ಗಣಿತದಲ್ಲಿ ಹೆಚ್ಚು ಆಕರ್ಷಿಸಲು ಸಹಕಾರಿ ಎಂದರು.

ರಾಷ್ಟ್ರೀಯ ಗಣಿತ ದಿವಸದ ಅಂಗವಾಗಿ ಆಯೋಜಿಸದ್ದ ಸ್ಪರ್ಧೆಗಳ ಬಹುಮಾನವನ್ನು ವಿತರಿಸಲಾಯಿತು. ಗಣಿತ ವಿಭಾಗದ ಮುಖ್ಯಸ್ಥೆ ಡಾ. ಪ್ರಮೀಳಾ ಕೊಳಕೆ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಸಾತ್ವಿಕ್ ಕೆ.ಡಿ ಸ್ವಾಗತಿಸಿ, ದೀಕ್ಷಾ ಎಸ್. ವಂದಿಸಿದರು. ಹರ್ಷಿಕಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!