Wednesday, October 14, 2026
Wednesday, October 14, 2026

ಅಕ್ಟೋಬರ್ 2 ರಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ: ಯಶ್ಪಾಲ್ ಸುವರ್ಣ

ಅಕ್ಟೋಬರ್ 2 ರಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಬೀಚ್ ಸ್ವಚ್ಛತಾ ಕಾರ್ಯಕ್ರಮ: ಯಶ್ಪಾಲ್ ಸುವರ್ಣ

Date:

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಟೀಮ್ ನೇಶನ್ ಫಸ್ಟ್ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ಅಂಗವಾಗಿ ಮಲ್ಪೆ ಪಡುಕರೆ ಶಾಂತಿನಗರದಲ್ಲಿ ಬೀಚ್ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಿರುವುದಾಗಿ ಬ್ಯಾಂಕಿನ ಆಧ್ಯಕ್ಷರಾದ ಯಶ್ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಿದ್ದು ಬೆಳಿಗ್ಗೆ 8.30ಕ್ಕೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ. ರಘುಪತಿ ಭಟ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಟೀಮ್ ನೇಶನ್ ಫಸ್ಟ್ ಅಧ್ಯಕ್ಷರಾದ ಸೂರಜ್ ಕಿದಿಯೂರು ಹಾಗೂ ಬ್ಯಾಂಕಿನ ನಿದೇರ್ಶಕರು ಭಾಗವಹಿಸಲಿದ್ದು, ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಟೀಮ್ ನೇಶನ್ ಫಸ್ಟ್ ತಂಡದೊಂದಿಗೆ 200 ಮಂದಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...

ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.13: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ...
error: Content is protected !!