Sunday, January 19, 2025
Sunday, January 19, 2025

ಡಿ. 18-ಮೆಗಾ ಲೋಕ್ ಅದಾಲತ್

ಡಿ. 18-ಮೆಗಾ ಲೋಕ್ ಅದಾಲತ್

Date:

ಉಡುಪಿ: ರಾಷ್ಟ್ರ‍ೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣದಲ್ಲಿ ಡಿಸೆಂಬರ್ 18 ರಂದು ಮೆಗಾ ಲೋಕ್ ಅದಾಲತ್ ನ್ನು ಆಯೋಜಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾ. ಶರ್ಮಿಳಾ ಎಸ್ ಹೇಳಿದ್ದಾರೆ.

ಜನಸಾಮಾನ್ಯರು ತಮ್ಮ ಸಮಯ, ಹಣ, ಅಲೆದಾಟ ಅಲ್ಲದೇ ರಕ್ತ ಸಂಬಂಧಿಗಳೊಂದಿಗೆ ಸಂಘರ್ಷವಿಲ್ಲದೆ ಅನ್ಯೋನ್ಯತೆ ಉಳಿಸಿಕೊಂಡು ಹೋಗಲು ರಾಜೀ ಸಂಧಾನವೇ ಪರಿಹಾರ. ಅದನ್ನು ಪಡೆಯುವ ಉದ್ದೇಶವೇ ಮೆಗಾ ಲೋಕ್ ಅದಾಲತ್.

ಕೊರೊನಾ ಸೋಂಕಿನ ಕಾರಣ ಎರಡು ವರ್ಷಗಳ ಕಾಲ ನ್ಯಾಯಾಲಯದ ಕಲಾಪಗಳು ಸರಿಯಾಗಿ ನಡೆಯದೇ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಆಗದೇ ಕಕ್ಷಿದಾರರಿಗೆ ಸಮಸ್ಯೆಯಾಗಿದೆ.

ಆದಕಾರಣ ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ವಿಚ್ಛೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂ ಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಾತ್ಮಕವಾಗಿ ರಾಜೀಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ ಮುಖಾಂತರ ಬಗೆಹರಿಸಿಕೊಳ್ಳಬಹುದಾಗಿದೆ.

ಕಾನೂನು ಸೇವೆಗಳ ಪ್ರಾಧಿಕಾರ ನೀಡಲಿದೆ ನೆಮ್ಮದಿಯ ಪರಿಹಾರ: ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪ್ರತೀ ದಿನ ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತವೆ. ಅದರಲ್ಲಿ ನ್ಯಾಯಾಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣವನ್ನು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನವನ್ನು ನೀಡಲಾಗುವುದು.

ಪಕ್ಷರಾರರಿಗೆ ಒಪ್ಪಿಗೆಯಾಗುವಂತೆ ವಿವಾದಗಳ ಇತ್ಯರ್ಥವಾಗುವುದರಿಂದ ಇಬ್ಬರ ಸಂಬಂಧವು ಉಳಿದು ಇಬ್ಬರೂ ಗೆದ್ದ ಮನೋಭಾವದಿಂದ ಸಂತೋಷವಾಗಿರಬಹುದು. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಸದರಿ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ.

ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯಪಡೆದುಕೊಂಡು ತಮ್ಮ ಸಮಯ ಹಾಗೂ ಸಂಬಂಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ. ಕೋವಿಡ್ ಕಾರಣದಿಂದ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದ ಪಕ್ಷದಲ್ಲಿ ಕಕ್ಷಿಗಾರರು ಆನ್ ಲೈನ್, ವಿಡಿಯೋ ಕಾನ್ಫರೆನ್ಸ್, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಮೆಗಾ ಲೋಕ್ ಅದಾಲತ್ ನಲ್ಲಿ ಭಾಗವಹಿಸಿ ವಿವಾದವನ್ನು ಬಗೆಹರಿಸಿಕೊಳ್ಳಬಹುದು.

“ಕೈ ಬೀಸಿ ಕರೆಯುತಿದೆ ಜನತಾ ನ್ಯಾಯಾಲಯ, ಬಂದರೆ ಉಳಿಯುವುದು ಹಣ ಮತ್ತು ಸಮಯ”

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ: 0820- 2523355

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!