ಶೀಘ್ರದಲ್ಲಿ ಕಾಲೇಜು ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಪದವಿ ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಬೋಧಕೇತರರಿಗೆ ಲಸಿಕೆ ನೀಡುವ ಯೋಜನೆಗೆ ಸಂಬಂಧಿಸಿದಂತೆ ಹಾಗೂ ಉಡುಪಿ ಜಿಲ್ಲಾಧಿಕಾರಿಯವರ ಸೂಚನೆಯ ಮೇರೆಗೆ ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ವಿದ್ಯಾರ್ಥಿಗಳಿಗೆ ಮತ್ತು ಬೋಧಕ ಬೋಧಕೇತರರಿಗೆ ಸೋಮವಾರ (ಜೂನ್ 28) ಕಾಲೇಜಿನಲ್ಲಿ ಬ್ರಹತ್ ಲಸಿಕಾ ಶಿಬಿರ ಹಮ್ಮಿಕೊಂಡಿದ್ದು ಸುಮಾರು 600 ವಿದ್ಯಾರ್ಥಿಗಳು ಭಾಗವಹಿಸುವ ಸಾಧ್ಯತೆಯಿದೆ. ನೊಂದಣಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಲಿಂಕ್ ನ್ನು ತರಗತಿಗಳಿಗೆ ವಾಟ್ಸಾಪ್ ಮೂಲಕ ಕಳುಹಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಹೇಳಿದ್ದಾರೆ.
ಈ ಲಸಿಕಾ ಶಿಬಿರವು ತೆಂಕನಿಡಿಯೂರು ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮತ್ತು ಕಾಲೇಜಿನ ಬೋಧಕ ಬೋಧಕೇತರರಿಗೆ ಮಾತ್ರ, ಇದನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಕಾಲೇಜಿನ ವಠಾರದಲ್ಲಿ ಯಾವುದೇ ಲಸಿಕಾ ಶಿಬಿರ ಇರುವುದಿಲ್ಲ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.