Monday, April 20, 2026
Monday, April 20, 2026

ಸಚಿವ ಜಗದೀಶ್ ಶೆಟ್ಟರ್ ಉಡುಪಿ ಪ್ರವಾಸ

ಸಚಿವ ಜಗದೀಶ್ ಶೆಟ್ಟರ್ ಉಡುಪಿ ಪ್ರವಾಸ

Date:

ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ್ ಅವರು ಜುಲೈ 4, 5 ಮತ್ತು 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜುಲೈ 4 ರಂದು ಮಧ್ಯಾಹ್ನ 12.30 ಕ್ಕೆ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ಜು. 5 ರಂದು ಮಧ್ಯಾಹ್ನ 3.30 ಕ್ಕೆ ಬೆಳಪು ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಆಕ್ಸಿಜನ್ ಘಟಕಕ್ಕೆ ಭೇಟಿ ಹಾಗೂ ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4.15 ಕ್ಕೆ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ, ನಂತರ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಿರುವರು.

ಜು. 6 ರಂದು ಬೆಳಗ್ಗೆ 9 ಗಂಟೆಗೆ ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಡುಪಿ ವಿಧಾನಸಭಾ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಕೃಷಿ ಕಾರ್ಯಕ್ರಮದ ವೀಕ್ಷಣೆ ನಡೆಸಲಿದ್ದಾರೆ. 10 ಗಂಟೆಗೆ ಉಡುಪಿ ವಿಧಾನಸಭಾ ವ್ಯಾಪ್ತಿಯಲ್ಲಿ ಸಸ್ಯೋತ್ಸವ – 25,000 ಸಸಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು...

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ...

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು...

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ...
error: Content is protected !!