Friday, July 24, 2026
Friday, July 24, 2026

ಇಂದ್ರಾಳಿ ರೈಲು ನಿಲ್ದಾಣ- ಅಪ್ರಾಪ್ತ ಬಾಲಕಿಯ ರಕ್ಷಣೆ

ಇಂದ್ರಾಳಿ ರೈಲು ನಿಲ್ದಾಣ- ಅಪ್ರಾಪ್ತ ಬಾಲಕಿಯ ರಕ್ಷಣೆ

Date:

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕಿ ಅಸಹಾಯಕ ಸ್ಥಿತಿಯಲ್ಲಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಕ್ಕಳ ಸಹಾಯವಾಣಿಯಿಂದ ದೂರು ಬಂದಿತ್ತು.

ಸಾಮಾಜಿಕ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಪ್ರಮೋದ್, ನಯನ, ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ಅವರು ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಿದರು.

ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೆ, ಅಲ್ಲಿ ಕೆಲಸ ತುಂಬ ಕಠಿಣವಾಗಿರುವುದರಿಂದ, ಕಾರ್ಖಾನೆಯ ಮಾಲೀಕರಿಗೆ ಹೇಳದೆ, ನಾನು ಸ್ವಂತ ಊರಾದ ಮಧ್ಯಪ್ರದೇಶಕ್ಕೆ ಹೋಗಲು ನಿರ್ಧರಿಸಿ ಇಂದ್ರಾಳಿ ರೈಲು ನಿಲ್ದಾಣಕ್ಕೆ ಬಂದಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಳು.

ನಂತರ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ಮೌಖಿಕ ಆದೇಶದಂತೆ ಬಾಲಕಿಯರ ಬಾಲಮಂದಿರ ನಿಟ್ಟೂರು ಇಲ್ಲಿ ತಾತ್ಕಾಲಿಕ ಪುನರ್ವಸತಿಯನ್ನು ಕಲ್ಪಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!