ಉಡುಪಿ: ಮಂಗಳೂರು ವಾಮಂಜೂರಿನ ಕರಾವಳಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಫಾರ್ಮಾ ಡಿ ವ್ಯಾಸಾಂಗ ಮಾಡುತ್ತಿದ್ದ ನಿಶಾ (20) ಎಂಬ ಯುವತಿಯು ಡಿಸೆಂಬರ್ 27 ರಂದು ಬೆಳಗ್ಗೆ ಉಡುಪಿಯ ತಮ್ಮ ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.