Sunday, January 19, 2025
Sunday, January 19, 2025

ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Date:

ಉಡುಪಿ, ಜು. 21: ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು ಪ್ರದೇಶದಲ್ಲಿ ಕಡಲ್ಕೊರೆತ ಪೀಡಿತ ಭಾಗಗಳಿಗೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಲ್ಕೊರೆತ ಪ್ರದೇಶದಲ್ಲಿ ಈಗಾಗಲೇ ಹಲವು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಹಲವು ಮನೆಗಳು ಹಾಗೂ ಲಕ್ಷ್ಮೀ ನಾರಾಯಣ ಭಜನ ಮಂದಿರದ ಬಳಿಯ ತಡೆಗೋಡೆ ಸಮುದ್ರ ಪಾಲಾಗುವ ಸಂಭವವಿದ್ದು ತಕ್ಷಣ ತುರ್ತು ಕಾಮಗಾರಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳದಲ್ಲೇ ಮೀನುಗಾರಿಕೆ ಸಚಿವರಾದ ಮಾಂಕಾಳ ವೈದ್ಯರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆಯ ಗಂಭೀರತೆ ಬಗ್ಗೆ ಚರ್ಚಿಸಿ ತಕ್ಷಣ ಕಡಲ್ಕೊರೆತ ತಡೆ ಕಾಮಗಾರಿಗೆ 5 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಮಂಗಳವಾರ ಕರಾವಳಿ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಮನವಿ ಮಾಡುವುದಾಗಿ ತಿಳಿಸಿದರು.

ಉಡುಪಿ ತಹಶೀಲ್ದಾರ್ ಗುರುರಾಜ್, ಕೆಮ್ಮಣ್ಣು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮ ರವೀಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ಪುರಂದರ, ಪ್ರಶಾಂತ್, ಸ್ಥಳೀಯ ಮುಖಂಡರಾದ ಮುತ್ತ, ಬಂದರು ಇಲಾಖೆಯ ಅಧಿಕಾರಿಗಳು, ಕೆಮ್ಮಣ್ಣು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!