Monday, November 11, 2024
Monday, November 11, 2024

ವಿಧಾನ ಪರಿಷತ್ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಶೇ 99.48 ಮತದಾನ

ವಿಧಾನ ಪರಿಷತ್ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಶೇ 99.48 ಮತದಾನ

Date:

ಉಡುಪಿ: ಜಿಲ್ಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಒಟ್ಟು 99.48% ಮತದಾನ ನಡೆದಿದೆ.

ಜಾಹೀರಾತು

ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ 1203 ಪುರುಷ, 1289 ಮಹಿಳಾ ಸದಸ್ಯರು ಸೇರಿದಂತೆ ಒಟ್ಟು 2492 ಮಂದಿ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.

ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದು, 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 43.91 % ಮತದಾನ ನಡೆದಿದ್ದು, 2505 ಮಂದಿ ಮತದಾರರಲ್ಲಿ 1100 ಮಂದಿ ಮತದಾನ ಮಾಡಿದ್ದರು.

ಕುಂದಾಪುರ ತಾಲೂಕಿನ ಆಲೂರು, ಚಿತ್ತೂರು, 74 ಉಳ್ಳೂರು, ಹಾರ್ದಳ್ಳಿ-ಮಂಡಳ್ಳಿ. ಬ್ರಹ್ಮಾವರ ತಾಲೂಕಿನ ಕೋಟತಟ್ಟು, ಬಾರ್ಕೂರು. ಹೆಬ್ರಿ ತಾಲೂಕಿನ ಮಡಾಮಕ್ಕಿ, ನಾಡ್ಪಾಲು. ಕಾರ್ಕಳ ತಾಲೂಕಿನ ಎರ್ಲಪಾಡಿ, ಹಿರ್ಗಾನ, ಕೆರ್ವಾಶೆ, ದುರ್ಗಾ, ಪಳ್ಳಿ, ನಿಟ್ಟೆ, ನಲ್ಲೂರು, ರೆಂಜಾಳ, ಬೋಳ, ನಂದಳಿಕೆ, ಮುಂಡ್ಕೂರು ಗ್ರಾಮ ಪಂಚಾಯತ್‌ಗಳಲ್ಲಿ ಎಲ್ಲಾ ಮತದಾರರು ಮತ ಚಲಾಯಿಸಿದ್ದು, 100% ಮತದಾನ ನಡೆದಿತ್ತು.

ಬೆಳಗ್ಗೆ 10 ಗಂಟೆಯ ನಂತರ ಮತದಾನ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದ್ದು, ಪಂಚಾಯತ್‌ಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದರು.

ಪೆರ್ಡೂರು ಗ್ರಾಮ ಪಂಚಾಯತ್‌ನಲ್ಲಿ ಸದಸ್ಯರುಗಳು ಸರತಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. 12 ಗಂಟೆಯ ವೇಳೆಗೆ ಬೈಂದೂರಿನ 9, ಕುಂದಾಪುರದ 22, ಬ್ರಹ್ಮಾವರದ 20, ಉಡುಪಿಯ 10, ಕಾಪುವಿನ 12, ಹೆಬ್ರಿಯ 5, ಕಾರ್ಕಳದ 12 ಗ್ರಾಮ ಪಂಚಾಯತ್‌ಗಳಲ್ಲಿ 100% ಮತದಾನ ನಡೆದಿತ್ತು. ಮಧ್ಯಾಹ್ನ 2 ಗಂಟೆಯ ವೇಳೆಗೆ ಹೆಬ್ರಿ ತಾಲೂಕಿನಲ್ಲಿ 100% ಮತದಾನ ನಡೆದಿತ್ತು.

ಅಂತಿಮವಾಗಿ ಬೈಂದೂರು ಮತ್ತು ಹೆಬ್ರಿ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ 100% ಮತದಾನ ನಡೆದಿದ್ದು, ಕುಂದಾಪುರದ 40, ಬ್ರಹ್ಮಾವರದ 26, ಉಡುಪಿಯ 16, ಕಾಪುವಿನ 13, ಕಾರ್ಕಳದ 26 ಗ್ರಾಮ ಪಂಚಾಯತ್ ಗಳಲ್ಲಿ 100% ಮತದಾನವಾಗಿದೆ.

ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಮತದಾನ ಪ್ರಕ್ರಿಯೆ ನಡೆದಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರದ್ದು ಶ್ರೇಷ್ಠ ವ್ಯಕ್ತಿತ್ವ: ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್

ಕೋಟ, ನ.10: ಕಾರಂತರು ಹುಟ್ಟಿದ ನೆಲದಲ್ಲಿ ಧನ್ಯತೆಯ ಭಾವ ಮೈದುಂಬಿದೆ. ಪ್ರಶಸ್ತಿ...

ಮಣಿಪಾಲ: ‘ಗಿರಿಜಾ ಸರ್ಜಿಕಲ್ಸ್’ ನೂತನ ಶಾಖೆ ಉದ್ಘಾಟನೆ

ಮಣಿಪಾಲ, ನ.10: ಅಂತರಾಷ್ಟ್ರೀಯ ಖ್ಯಾತಿಯ ಮಣಿಪಾಲದಲ್ಲಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸರ್ಜಿಕಲ್...

‘ನನ್ನ ನಾಡು ನನ್ನ ಹಾಡು’ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ, ನ.10: ಲಯನ್ಸ್ 317 ಸಿ ಹಾಗೂ ರೋಟರಿ ಕ್ಲಬ್ ಜಿಲ್ಲೆ...

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಭಾಗಿ

ಉಡುಪಿ, ನ.10: ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ...
error: Content is protected !!