Thursday, September 3, 2026
Thursday, September 3, 2026

ತೆಂಕನಿಡಿಯೂರು ಕಾಲೇಜು: ಎಂ.ಎಸ್.ಡಬ್ಲ್ಯೂ ವಿಭಾಗದ ಶೈಕ್ಷಣಿಕ ಭೇಟಿ

ತೆಂಕನಿಡಿಯೂರು ಕಾಲೇಜು: ಎಂ.ಎಸ್.ಡಬ್ಲ್ಯೂ ವಿಭಾಗದ ಶೈಕ್ಷಣಿಕ ಭೇಟಿ

Date:

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿಯ ಎಂ.ಎಸ್.ಡಬ್ಲ್ಯೂ ವಿಭಾಗದ ಶೈಕ್ಷಣಿಕ ಅಧ್ಯಯನ ಭೇಟಿಯ ಪ್ರಯುಕ್ತ ಮಂಗಳೂರಿನ ಕುಲಶೇಖರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಡೇರಿ ಘಟಕಕ್ಕೆ ಭೇಟಿ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮಹೇಶ್ ಅವರು ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಬಳಿಕ ಮಂಗಳೂರಿನ ಡೀಡ್ಸ್ ಸರಕಾರೇತರ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರಾದ ಮರ್ಲಿನ್ ಮಾರ್ಟಿಸ್ ಸಂಸ್ಥೆಯ ಕಾರ್ಯನಿರ್ವಹಣೆಯ ಕುರಿತು ಮಾಹಿತಿ ನೀಡಿದರು.

ಫಾದರ್ ಮುಲ್ಲರ್ ಆಸ್ಪತ್ರೆಯ ಸೈಕಿಯಾಟ್ರಿ ವಿಭಾಗಕ್ಕೆ ಭೇಟಿ ನೀಡಲಾಯಿತು. ಸಂಸ್ಥೆಯ ಜೀಟಾರವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ವಿಭಾಗದ ಸಹಾಯಕ ಪ್ರಾಧ್ಯಾಕರಾದ ಸುಷ್ಮಾ ಟಿ., ವಿಭಾಗದ ಉಪನ್ಯಾಸಕರಾದ ಗಣೇಶ್ ಪ್ರಸಾದ್ ಜಿ. ನಾಯಕ್, ಶ್ರೀಕಲಾ ಕುಮಾರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!