Tuesday, November 10, 2026
Tuesday, November 10, 2026

ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಪಂದ್ಯಾವಳಿ

ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಪಂದ್ಯಾವಳಿ

Date:

ಉಡುಪಿ: ಕಲಿಯುವಿಕೆಯೊಂದಿಗೆ ದೈಹಿಕ ಕ್ಷಮತೆಯು ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾಗಿದೆ. ಈ ದೃಷ್ಟಿಯಿಂದಲೇ ಹೊಸ ಶಿಕ್ಷಣ ನೀತಿಯು ಕ್ರೀಡೆಯನ್ನು ಅಧ್ಯಯನದ ಒಂದು ಭಾಗವಾಗಿ ಪರಿಗಣಿಸಿದೆ ಎಂದು ಉಡುಪಿ ದಕ್ಷಿಣ ಕನ್ನಡ ಮೀನುಗಾರಿಕಾ ಫೆಡರೇಶನಿನ ಅಧ್ಯಕ್ಷರಾದ ಯಶಪಾಲ್ ಸುವರ್ಣ ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಉಡುಪಿ ವಲಯದ ಪದವಿ
ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿಯವರು, ಶೈಕ್ಷಣಿಕ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ವಿವರಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಪ್ರೊ. ಒಲಿವರ್ ಜೇಮ್ಸ್, ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಡಾ. ಹರಿದಾಸ ಕೂಳೂರು, ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿ, ಉಮೇಶ್ ಪೈ ವಂದಿಸಿದರು. ದಯಾನಂದ ಕರ್ಕೇರಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...
error: Content is protected !!