Sunday, August 30, 2026
Sunday, August 30, 2026

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: 21ನೇ ವರ್ಷದ ವಾರ್ಷಿಕ ಮಹಾಸಭೆ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: 21ನೇ ವರ್ಷದ ವಾರ್ಷಿಕ ಮಹಾಸಭೆ

Date:

ಬೆಳ್ಮಣ್: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 21ನೇ ವಾರ್ಷಿಕ ಮಹಾಸಭೆಯು ಆದಿತ್ಯವಾರ ಸಂಘದ ರಂಗ ಮಂದಿರದಲ್ಲಿ ಸಂಘದ ಅಧ್ಯಕ್ಷ ಬೋಳ ಉದಯ ಅಂಚನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘದ 2020-21ನೇ ಸಾಲಿನ ವಾರ್ಷಿಕ ವರದಿಯನ್ನು ಹಾಗೂ ವಾರ್ಷಿಕ ಲೆಕ್ಕಪತ್ರವನ್ನು ಸಂಘದ ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ ಮಂಡಿಸಿದರು. ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಪ್ರಸ್ತಾವಿಕ ಮಾತುಗಳನ್ನಾಡಿದರು.

2021-22ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು ವೇದಿಕೆಯಲ್ಲಿ ನೂತನ ಅಧ್ಯಕ್ಷ ಪ್ರಶಾಂತ್ ಅಂಚನ್, ನೂತನ ಕಾರ್ಯದರ್ಶಿ ಸುರೇಶ್ ಪೂಜಾರಿ ಕಾಸ್ರಬೈಲು, ನೂತನ ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ನೂತನ ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ನೂತನ ಕೋಶಾಧಿಕಾರಿ ವೀಣಾ ಪೂಜಾರಿ, ನೂತನ ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಅಬ್ಬನಡ್ಕ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ, ಪೂವಾಧ್ಯಕ್ಷರಾದ ಆನಂದ ಪೂಜಾರಿ, ದಿನೇಶ್ ಬಿರೋಟ್ಟು, ಸತೀಶ್ ಅಬ್ಬನಡ್ಕ, ರಾಜೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!