Sunday, January 19, 2025
Sunday, January 19, 2025

ಹೊಸ ಶಿಕ್ಷಣ ನೀತಿಯಲ್ಲಿ ಹೊಸ ಅವಕಾಶಗಳಿವೆ: ಡಾ. ಗಣೇಶ್ ಅಮೀನ್ ಸಂಕಮಾರ್

ಹೊಸ ಶಿಕ್ಷಣ ನೀತಿಯಲ್ಲಿ ಹೊಸ ಅವಕಾಶಗಳಿವೆ: ಡಾ. ಗಣೇಶ್ ಅಮೀನ್ ಸಂಕಮಾರ್

Date:

ಉಡುಪಿ: ಹೊಸ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿವೆ. ಕೌಶಲ್ಯಗಳ ಕಲಿಕೆಗೆ ಹೆಚ್ಚು ಮಹತ್ವ ನೀಡಲಾಗಿದೆ. ಇದನ್ನು ಅರ್ಥಮಾಡಿಕೊಂಡು ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಬೇಕಾದ ಅಗತ್ಯವಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣಗುರು ಹಾಗೂ ರಾಣಿ ಅಬ್ಬಕ್ಕ ಪೀಠದ ಸಂಚಾಲಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐ.ಕ್ಯೂ.ಎ.ಸಿ ಆಶ್ರಯದಲ್ಲಿ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ನಡೆದ ಹೊಸಶಿಕ್ಷಣ ನೀತಿಯ ಕುರಿತಾಗಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.

ಹೊಸಶಿಕ್ಷಣ ನೀತಿಯ ಉದ್ದೇಶ ಮತ್ತು ಆಶಯಗಳನ್ನು ವಿವರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಮಂಜುಳಾ ಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಯೋಜಕ ಡಾ. ಸುರೇಶ್ ರೈ ಕೆ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಉಪಸ್ಥಿತರಿದ್ದರು.

ರಾಷ್ಟ್ರ‍ೀಯ ಶಿಕ್ಷಣ ನೀತಿ ಕಾಲೇಜು ಟಾಸ್ಕ್ ಪೋರ್ಸಿನ ಮುಖ್ಯಸ್ಥೆ ಡಾ. ಸುನೀತಾ ಎಂ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಉಮೇಶ್ ಪೈ ವಂದಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶರ್ಮಿಳಾ ಹಾರಾಡಿ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!