ಮಂಗಳೂರು: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು. ಸಂಸದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಶಾಸಕರುಗಳಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವೆನ್ಲಾಕ್ ಆಸ್ಪತ್ರೆಯ ನೂತನ ಐಸಿಯು ಘಟಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ವೆನ್ಲಾಕ್ ಆಸ್ಪತ್ರೆಯ ನೂತನ ಐಸಿಯು ಘಟಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
Date: