Saturday, September 5, 2026
Saturday, September 5, 2026

ರಾ.ಹೆ 66 ರಲ್ಲಿ ಕಾಲು ಸೇತುವೆ ರಚನೆಗೆ ರೂ. 4.36 ಕೋಟಿ ಅನುದಾನ ಮಂಜೂರು: ಶೋಭಾ ಕರಂದ್ಲಾಜೆ

ರಾ.ಹೆ 66 ರಲ್ಲಿ ಕಾಲು ಸೇತುವೆ ರಚನೆಗೆ ರೂ. 4.36 ಕೋಟಿ ಅನುದಾನ ಮಂಜೂರು: ಶೋಭಾ ಕರಂದ್ಲಾಜೆ

Date:

ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಲವಾರು ಭಾಗಗಳಲ್ಲಿ ಕ್ರಾಸಿಂಗ್ ಗಳನ್ನು ನಿರ್ಮಾಣ ಮಾಡುವ ಅಗತ್ಯತೆ ಇದ್ದು ಈ ಕುರಿತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ವಿನಂತಿ ಮಾಡಲಾಗಿತ್ತು.

ಕೇಂದ್ರ ಭೂ ಸಾರಿಗೆ ಸಚಿವರು ಉಡುಪಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಒಟ್ಟು ರೂ. 4.36 ಕೋಟಿಗಳ ವೆಚ್ಚದಲ್ಲಿ ಪಾದಚಾರಿ ಕಾಲು ಸೇತುವೆಗಳನ್ನು ನಿರ್ಮಿಸಲು ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿರುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಈ ಕೆಳಗಿನ ಪ್ರದೇಶಗಳಲ್ಲಿ ಸ್ಟೀಲ್ ಕಾಲು ಸೇತುವೆ ನಿರ್ಮಾಣವಾಗಲಿದೆ.

1. ಬಡಾ ಎರ್ಮಾಳ್, ಕಾಪು ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿ)
2. ಆನೆಗುಡ್ಡೆ, ಕುಂದಾಪುರ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿ)
3. ಮಹೇಶ್ ಆಸ್ಪತ್ರೆಯ ಬಳಿ, ಉಡುಪಿ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿ)
4. ಅಂಬಾಗಿಲು, ಉಡುಪಿ ವಿಧಾನಸಭಾ ಕ್ಷೇತ್ರ (ರೂ. 1.08 ಕೋಟಿ)

ಜನ ಸಂಚಾರ ಹೆಚ್ಚಿರುವ ಈ ಮೇಲಿನ ಪ್ರದೇಶಗಳಲ್ಲಿ, ರಸ್ತೆಯನ್ನು ದಾಟಲು ಜನಸಾಮಾನ್ಯರಿಗೆ ಸಹಾಯವಾಗುವಂತೆ ಸ್ಟೀಲ್ ಪಾದಚಾರಿ ಕಾಲು ಸೇತುವೆಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿರುತ್ತದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!